ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ ಬಡಿದ ಭೀಕರ ಪೆಟ್ಟು. ಜವಾಬ್ದಾರಿಯುತ ಅಧ್ಯಕ್ಷರೇ ಆರ್ಥಿಕ ವಂಚನೆಯ ಆರೋಪ ಎದುರಿಸಿ ಆಜೀವ ಸದಸ್ಯತ್ವ ಕಳೆದುಕೊಳ್ಳುವಂತಾಗಿರುವುದು ನಾಲ್ಕು ಲಕ್ಷಕ್ಕೂ ಅಧಿಕ ಸದಸ್ಯರ ನಂಬಿಕೆಗೆ ಎಸಗಿದ ಮಹಾ ದ್ರೋಹವಾಗಿದೆ. ಈ ಸಾಂಸ್ಕೃತಿಕ ಪತನವನ್ನು ತಡೆಯಲು ಸರ್ಕಾರವು ತಕ್ಷಣವೇ ಕಠಿಣ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆಯ ಮೂಲಕ ದುರುಪಯೋಗವಾದ ಸಾರ್ವಜನಿಕರ ಹಣವನ್ನು ವಸೂಲಿ ಮಾಡಬೇಕು. ಆಡಳಿತಾಧಿಕಾರಿ ಆಳ್ವಿಕೆಯನ್ನು ದೀರ್ಘಕಾಲ ಮುಂದುವರಿಸದೆ ತಕ್ಷಣ ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ವೆಚ್ಚ ತಗ್ಗಿಸಲು ಡಿಜಿಟಲ್ ಮತದಾನ ಜಾರಿಗೊಳಿಸಬೇಕು. ಅಧ್ಯಕ್ಷರ ಸರ್ವಾಧಿಕಾರಕ್ಕೆ ಬ್ರೇಕ್ ಹಾಕಿ, ಬೈಲಾ ತಿದ್ದುಪಡಿಯ ಮೂಲಕ ಮಹಿಳೆಯರು ಹಿಂದುಳಿದ ವರ್ಗಗಳಿಗೆ ಕಡ್ಡಾಯ ಮೀಸಲಾತಿ ಹಾಗೂ ಸಮಾನ ಪ್ರಾತಿನಿಧ್ಯ ಕಲ್ಪಿಸಿ ಪರಿಷತ್ತಿನ ಸ್ವಾಯತ್ತತೆಯನ್ನು ರಕ್ಷಿಸಬೇಕು.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…