ಓದುಗರ ಪತ್ರ
ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ಆಚರಣೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟು, ನೂರಾರು ಜನ ಗಾಯಗೊಂಡ ಪ್ರಕರಣ ಹೃದಯ ವಿದ್ರಾವಕವಾಗಿದೆ. ರಾಜ್ಯಸರ್ಕಾರದ ವಿಫಲತೆಯೇ ಇಂತಹ ದುರ್ಘಟನೆ ನಡೆಯಲು ಕಾರಣವೆಂದು ಯಥಾಪ್ರಕಾರ ವಿರೋಧ ಪಕ್ಷಗಳು ಟೀಕಿಸಿವೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಹತ್ತು ಲಕ್ಷ ರೂಪಾಯಿಗಳ ಪರಿಹಾರವನ್ನು ರಾಜ್ಯಸರ್ಕಾರ ಈಗಾಗಲೇ ಘೋಷಿಸಿದ್ದು, ಇಡೀ ಘಟನೆಯನ್ನು ವಿಚಾರಣೆಗೆ ಒಳಪಡಿಸಲು ನ್ಯಾ.ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕವ್ಯಕ್ತಿ ಆಯೋಗವನ್ನು ರಚಿಸಿದೆ. ಘಟನೆ ತುಂಬಾ ಗಂಭೀರವಾಗಿರುವುದರಿಂದ ರಾಜ್ಯಸರ್ಕಾರ ಬೆಂಗಳೂರಿನ ಪೊಲೀಸ್ ಆಯುಕ್ತರಾದ ದಯಾನಂದ್ ಸೇರಿದಂತೆ ಕೆಲವು ಮುಖ್ಯ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದೆ. ಜೊತೆಗೆ ಎಫ್‌ಐಆರ್ ಆಧಾರದ ಮೇಲೆ ಸಿಐಡಿ ತನಿಖೆಗೂ ಆದೇಶಿಸಲಾಗಿದೆ. ಈ ಮಧ್ಯೆ ಈ ಪ್ರಕರಣದ ಬಗ್ಗೆ ಸ್ವಯಂಪ್ರೇರಿತ ದೂರನ್ನು ದಾಖಲಿಸಿಕೊಂಡಿರುವ ರಾಜ್ಯದ ಉಚ್ಚ ನ್ಯಾಯಾಲಯ, ರಾಜ್ಯಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಮತ್ತೊಂದು ಕಡೆ, ಈ ಪ್ರಕರಣದಲ್ಲಿ ಬಹುತೇಕರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ. ಈ ದುರ್ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದಾರೆ. ಯಾರು ಏನೇ ಹೇಳಿದರೂ, ಟೀಕೆ ಮಾಡಿದರೂ ಆಗಬಾರದ್ದು ಆಗಿಹೋಗಿದೆ. ಸತ್ತವರನ್ನು ಬದುಕಿಸುವ ಸಾಮರ್ಥ್ಯ ಯಾರಲ್ಲೂ ಇಲ್ಲ. ಆದರೂ ಇಂತಹ ಸಂದರ್ಭಗಳಲ್ಲಿ ಕಠಿಣ ಮತ್ತು ಕಠೋರವಾದ ಮಾತುಗಳು ಬರುವುದು ಸಹಜ. ಘಟನೆಯ ಬಗ್ಗೆ ಈಗಾಗಲೇ ತನಿಖೆಗೆ ಆದೇಶ ಮಾಡಿರುವುದರಿಂದ ತಪ್ಪಿತಸ್ಥರ ಮೇಲೆ ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ. ರಾಜ್ಯ ಸರ್ಕಾರ ಇನ್ನು ಮುಂದಾದರೂ ಎಚ್ಚೆತ್ತುಕೊಂಡು ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುವುದು ಒಳ್ಳೆಯದು.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…