Andolana originals

ಓದುಗರ ಪತ್ರ: ಹೊಸ ವರ್ಷ ತರಲಿ ಹರುಷ

ಹೊಸ ವರ್ಷ ಎಲ್ಲರಿಗೂ ಹರುಷ ತರಲಿ, ಎಲ್ಲರ ನೋವುಗಳನ್ನು ದೂರ ಮಾಡಲಿ. 2024ರಲ್ಲಿ ಭಾರತ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ್ದರೂ ಸಾಕಷ್ಟು ಕರಾಳ ಘಟನೆಗಳಿಗೂ ಸಾಕ್ಷಿಯಾಗಿದೆ. ದೇಶದ ನಾನಾ ಭಾಗಗಳಲ್ಲಿ ನಡೆದ ರೈಲು ಅಪಘಾತ ಗಳು ನೂರಾರು ಮಂದಿಯನ್ನು ಬಲಿ ಪಡೆದರೆ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಹತ್ತಾರು ಗ್ರಾಮಗಳೇ ಕೊಚ್ಚಿ ಹೋಗಿ, ನೂರಾರು ಮಂದಿ ಜೀವ, ಜೀವನ ಕಳೆದುಕೊಂಡಿದ್ದಾರೆ.

ಉತ್ತರ ಕರ್ನಾಟಕ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿ ೧೧ ಮಂದಿ ಜೀವ ಕಳೆದುಕೊಂಡರು. ಇದಲ್ಲದೆ ಸತ್ಸಂಗದಲ್ಲಿ ಕಾಲ್ತುಳಿತದ ದುರಂತ, ದಿ ರಾಮೇಶ್ವರಂ ಕೆಫೆ ಸ್ಛೋಟ ಸೇರಿದಂತೆ ಅನೇಕ ಕರಾಳ ಅಧ್ಯಾಯಗಳಿಗೆ 2024 ಸಾಕ್ಷಿಯಾಗಿದೆ.

ಇನ್ನು ರತನ್ ಟಾಟಾ, ಪ. ರಾಜೀವ ತಾರಾನಾಥ್, ಸಂಸದ ವಿ. ಶ್ರೀನಿವಾಸ ಪ್ರಸಾದ್, ಕನ್ನಡದ ಖ್ಯಾತ ನಿರೂಪಕಿ ಅಪರ್ಣ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ, ತಬಲ ವಾದಕ ಜಾಕೀರ್ ಹುಸೇನ್ ರಂತಹ ಮಹನೀಯರು ಇಹಲೋಕ ತ್ಯಜಿಸಿದ್ದಾರೆ. ೨೦೨೪ರಲ್ಲಿ ಕ್ರೀಡೆಯಲ್ಲಿ ಭಾರತ ಅತ್ಯುತ್ತಮ ಸಾಧನೆ ಮಾಡಿದೆ. ಕ್ರಿಕೆಟ್ ಟಿ-20 ವಿಶ್ವಕಪ್ ಚಾಂಪಿಯನ್ ಆಗುವ ಜತೆಗೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅನೇಕ ಪದಕಗಳನ್ನು ಗೆದ್ದು ಬೀಗಿದರು. ಅಲ್ಲದೆ ವಿಶ್ವದ ಅತ್ಯಂತ ಕಿರಿಯ ಚೆಸ್ ಚಾಂಪಿಯನ್‌ಯಾಗಿ ಡಿ. ಗುಕೇಶ್ ಹೊರ ಹೊಮ್ಮಿದ್ದು, ಭಾರತಕ್ಕೆ ಹೆಮ್ಮೆಯ ವಿಚಾರ. ೨೦೨೫ರಲ್ಲಿಯೂ ದೇಶ ಸಾಧನೆಯ ಹಾದಿಯಲ್ಲಿ ಸಾಗಲಿ ಎಂದು ಹಾರೈಸೋಣ.

-ಎಸ್. ಪ್ರಶಾಂತ್, ಅಂತರಸಂತೆ, ಎಚ್. ಡಿ. ಕೋಟೆ ತಾ.

 

andolana

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

14 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

15 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

22 hours ago