ಓದುಗರ ಪತ್ರ
ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವ ಅಂಶ ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಾಲಯಗಳಲ್ಲಿಯೂ ನಂದಿನಿ ತುಪನ್ನೇ ಬಳಸಿ ಪ್ರಸಾದ ತಯಾರಿಸುವಂತೆ ಇಲಾಖೆ ಸುತ್ತೋಲೆ ಹೊರಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದೊಂದು ಸ್ವಾಗತಾರ್ಹ ಕ್ರಮ. ಕೆಲ ದಿನಗಳ ಹಿಂದೆ ನಾವು ಮಹದೇಶ್ವರ ಬೆಟ್ಟಕ್ಕೆ ಪ್ರವಾಸಕ್ಕೆಂದು ತೆರಳಿದ್ದಾಗ ಲಾಡು ಖರೀದಿಸಿ ತಂದಿದ್ದೆ. ಆದರೆ ಆ ಲಾಡು ಮನೆಗೆ ತರುವ ವೇಳೆಗಾಗಲೇ ಕಡ್ಲೆಹಿಟ್ಟಿನ ಉಂಡೆಯಂತಾಗಿದ್ದು, ಅದನ್ನು ತಯಾರಿಸಿ ಸಾಕಷ್ಟು ದಿನಗಳಾಗಿರಬಹುದು ಎಂಬ ಅನುಮಾನ ಕಾಡಿತ್ತು. 25 ರೂ. ನೀಡಿ ಖರೀದಿಸಿದ ಲಾಡು ಪೊಟ್ಟಣದ ಮೇಲೆ ಅದರ ದರವಾಗಲಿ, ತಯಾರಿಸಿದ ದಿನಾಂಕವನ್ನಾಗಲಿ ನಮೂದಿಸಿರಲಿಲ್ಲ. ಇದು ಕೇವಲ ಮಹದೇಶ್ವರ ಬೆಟ್ಟದಲ್ಲಿ ಮಾತ್ರವಲ್ಲ. ಚಾಮುಂಡಿಬೆಟ್ಟ, ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಗಳಲ್ಲೂ ಇದೇ ಪರಿಸ್ಥಿತಿ ಇದೆ. ಎಲ್ಲ ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಯನ್ನು ಗುತ್ತಿಗೆಗೆ ವಹಿಸುತ್ತಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಇಲಾಖೆ ಸೂಚನೆ ನೀಡಬೇಕಿದೆ.
-ಬಿ.ಎಂ.ಭ್ರಮರಾಂಬ, ಕನಕದಾಸನಗರ, ಮೈಸೂರು.
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…