Andolana originals

ಓದುಗರ ಪತ್ರ:  ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಸಿಗಲಿ

ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ದೇವಲಾಪುರ,  ದೇವಲಾಪುರದ ಹುಂಡಿ, ಪುರದ ಶೆಡ್ಡು, ತೆಲುಗುಮಸಳ್ಳಿ, ಕಾಟವಾಳು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಆನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರ ಬೆಳೆಗಳು ಕಾಡುಪ್ರಾಣಿಗಳ ಪಾಲಾಗುತ್ತಿವೆ.

ಈ ಗ್ರಾಮಗಳ ರೈತರು ಸಾಲ ಮಾಡಿ ಕೃಷಿ ಮಾಡುತ್ತಿದ್ದಾರೆ. ಅಲ್ಲದೆ ಹಗಲು ರಾತ್ರಿ ಎನ್ನದೆ ತಮ್ಮ ಜಮೀನುಗಳಲ್ಲಿ ಬೆಳೆದಿರುವ ರಾಗಿ, ಜೋಳ,  ಶುಂಠಿ, ಬಾಳೆ, ಕಬ್ಬು  ಮುಂತಾದ ಬೆಳೆಗಳನ್ನು ಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಕಾವಲು ಕಾಯುತ್ತಾರೆ. ಇಷ್ಟಿದ್ದರೂ ಬೆಳೆಗಳು ರೈತರ ಕೈ ಸೇರುತ್ತವೆ ಎಂಬ ಖಾತರಿ ಇಲ್ಲ.  ಈ ಭಾಗಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬೆಳೆದ ಬೆಳೆಗಳು ಕೈ ಸೇರುವ ಮುನ್ನವೇ ಕಾಡಾನೆಗಳು ಬೆಳೆಗಳನ್ನು ನಾಶ ಮಾಡುತ್ತಿವೆ.  ಇದರಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ.

ಅಲ್ಲದೆ ಅನೇಕ ರೈತರು ಕಾಡಾನೆಗಳ ದಾಳಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳೂ ಇವೆ. ಪ್ರತಿ ಬಾರಿಯೂ ರೈತರಿಗೆ ಇದೇ ಸಮಸ್ಯೆ ಎದುರಾಗುತ್ತಿದ್ದು, ಸಂಕಷ್ಟದಲ್ಲಿ ಜೀವನ ಸಾಗಿಸುವಂತಾಗಿದೆ.  ಅರಣ್ಯ ಇಲಾಖೆಯವರಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಈ ಭಾಗದ ಚುನಾಯಿತ ಪ್ರತಿನಿಧಿಗಳು, ಆನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಜತೆಗೆ ಕಾಡಿನ ಸುತ್ತ ರೈಲ್ವೆ ಕಂಬಿ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕಿದೆ.  ಇಲ್ಲದಿದ್ದರೆ ರೈತರ ಬದುಕು ದುಸ್ತರವಾಗಲಿದೆ.

-ಶಾಂತಮಲ್ಲಪ್ಪ, ದೇವಲಾಪುರದ ಹುಂಡಿ, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

10 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

11 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

12 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

13 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

16 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

16 hours ago