Andolana originals

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದ್ದು, ಊಟ, ಉಪಾಹಾರ, ಕಾಫಿ ಸವಿಯುವ ಸಂದರ್ಭದಲ್ಲಿ ತರಗತಿಗಳಲ್ಲಿ ನಡೆದ ಘಟನೆಗಳು, ಅಧ್ಯಯನಕ್ಕೆ ಸಂಬಂಧಿಸಿದ ಚರ್ಚೆಗಳು, ಅಧ್ಯಾಪಕರ ನಡುವೆ ಚರ್ಚೆಗೂ ರೌಂಡ್ ಕ್ಯಾಂಟೀನ್ ವೇದಿಕೆಯಂತಿದೆ. ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುವಾಗ ರೌಂಡ್ ಕ್ಯಾಂಟೀನ್‌ನನ್ನು ಮರೆಯಲಾಗುವುದಿಲ್ಲ.

ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದ್ದ ಉಪಾಹಾರಗೃಹ ಕಳೆದ ಒಂದು ವರ್ಷದಿಂದ ಮುಚ್ಚಿದ್ದು, ಅದರ ಒಳ ಮತ್ತು ಹೊರ ಆವರಣ ಕಸದ ರಾಶಿಗಳಿಂದ ತುಂಬಿ ತುಳುಕುತ್ತಿದೆ. ಕ್ಯಾಂಟೀನ್ ಪುನರಾರಂಭಿ ಸುವುದರೊಂದಿಗೆ ಆವರಣದಲ್ಲಿರುವ ಕಸವನ್ನು ತೆರವುಗೊಳಿಸಲು ಮೈಸೂರು ವಿವಿ ಅಧಿಕಾರಿಗಳು ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

9 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

10 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

11 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

11 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

11 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

14 hours ago