Andolana originals

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತಿ ನಂತರ ಸರದಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿ ತಾಯಿಯ ದರ್ಶನ ಮಾಡುತ್ತಾರೆ.

೧,೧೦೧ ಮೆಟ್ಟಿಲುಗಳನ್ನು ಹತ್ತಿ ಸುಸ್ತಾಗಿರುತ್ತಾರೆ. ಆನಂತರ ಉದ್ದುದ್ದ ಸಾಲುಗಳಲ್ಲಿ ನಿಂತುಕೊಂಡು ಚಾಮುಂಡೇಶ್ವರಿ ತಾಯಿ ದರ್ಶನ ಮಾಡುತ್ತಾರೆ. ಎಷ್ಟೋ ಭಕ್ತಾದಿಗಳು ಕಷ್ಟಪಟ್ಟು ಮೆಟ್ಟಿಲುಗಳನ್ನು ಹತ್ತಿ ಭಕ್ತರ ಉದ್ದನೆಯ ಸಾಲುಗಳನ್ನು ನೋಡಿ ನನ್ನ ಕೈಲಿ ಇಷ್ಟೊಂದು ಕ್ಯೂ ಬಳಸಿಕೊಂಡು ಒಳಕ್ಕೆ ಹೋಗೊಕೆ ಆಗಲ್ಲ ಎಂದು ಹೊರಗಡೆನೇ ನಿಂತುಕೊಂಡು ಕೈಮುಗಿದು ಹೊರಟುಬಿಡು ವವರ ಸಂಖ್ಯೆಗೂ ಕಮ್ಮಿಯಿರುವುದಿಲ್ಲ. ಇಂತಹ ಭಕ್ತಾದಿಗಳಿಗೆ ನೇರ ದರ್ಶನ ವ್ಯವಸ್ಥೆ ಇದ್ದರೆ ದೇವಿಯ ದರ್ಶನ ಮಾಡಿ ಪುನೀತರಾಗುತ್ತಾರೆ.

ತಿರುಪತಿಯಲ್ಲಿರುವಂತೆ ಚಾಮುಂಡಿ ಬೆಟ್ಟದಲ್ಲಿಯೂ ಮೆಟ್ಟಿಲುಗಳ ಮೂಲಕ ಹತ್ತಿ ಬರುವ ಭಕ್ತಾದಿಗಳಿಗೆ ನೇರ ದರ್ಶನ ವ್ಯವಸ್ಥೆ ಮಾಡಿದರೆ ಅನುಕೂಲವಾಗುತ್ತದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಸ್ಥಳೀಯ ಜನಪ್ರತಿನಿಽಗಳು, ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಈ ಬಾರಿಯ ಆಷಾಢ ಶುಕ್ರವಾರಗಳಲ್ಲಿ ಮೆಟ್ಟಿಲುಗಳನ್ನು ಹತ್ತಿ ಬರುವ ಭಕ್ತಾದಿಗಳಿಗೆ ಚಾಮುಂಡೇಶ್ವರಿ ತಾಯಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.

-ಅಹಲ್ಯ ಸಿ.ನಾ. ಚಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

44 mins ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

4 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

4 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

4 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

4 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

5 hours ago