ಓದುಗರ ಪತ್ರ
ಮೈಸೂರು ನಗರಕ್ಕೆ ಮುಕುಟದಂತಿರುವ ಕರ್ನಾಟಕ ಕಲಾಮಂದಿರದಲ್ಲಿ ಕಳೆದ ಗುರುವಾರ ರಾತ್ರಿ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ದಸರಾ ಸಮಿತಿಯವರು ಅಲ್ಲಿಯೇ ಬಾಡೂಟ ಸೇವಿಸಿರುವುದು ಬೇಸರದ ಸಂಗತಿ. ಈ ಹಿಂದೆ ಕಲಾಮಂದಿರದಲ್ಲಿ ನಡೆದ — ಕಾರ್ಯಕ್ರಮವೊಂದರಲ್ಲಿ ಮಾಂಸದೂಟದ ವ್ಯವಸ್ಥೆ ಮಾಡಿದ್ದಾಗ ಮೈಸೂರಿನ ಅನೇಕ ಸಾಹಿತಿಗಳು, ಕಲಾವಿದರು, ರಂಗಕರ್ಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆಗ ಇಲ್ಲಿ ಯಾವುದೇ ರೀತಿಯ ಊಟದ ವ್ಯವಸ್ಥೆ ಮಾಡಬಾರದು. ಒಂದು ವೇಳೆ ಮಾಡಿದರೂ ಕಲಾಮಂದಿರದ ಹೊರಭಾಗದಲ್ಲಿ ಸಸ್ಯಾಹಾರಕ್ಕೆ ಮಾತ್ರ ವ್ಯವಸ್ಥೆ ಕಲ್ಪಿಸಬೇಕು ಎಂದು ತೀರ್ಮಾನಿಸಲಾಗಿತ್ತು.
ಕಲಾಮಂದಿರಕ್ಕೆ ಎಲ್ಲ ಸಮುದಾಯದವರೂ ಬಂದು ಹೋಗುವುದರಿಂದ ಇಲ್ಲಿ ಮಾಂಸಾಹಾರ ಸೇವನೆ ಮಾಡುವುದು ಅಷ್ಟು ಸೂಕ್ತವಲ್ಲ ಎಂದು ಈ ನಿರ್ಧಾರ ಮಾಡಲಾಗಿತ್ತು. ಇದರ ಕನಿಷ್ಠ ಜ್ಞಾನವೂ ಇಲ್ಲದೆ ಕೆಲ ಅಧಿಕಾರಿಗಳು ಮಾಂಸಾಹಾರ ಸೇವನೆ ಮಾಡಿರುವುದು ತಪ್ಪು. ಅಧಿಕಾರಿಗಳಿಗೆ ತಾವು ಏನೇ ಮಾಡಿದರೂ ಯಾರೂ ಪ್ರಶ್ನಿಸುವುದಿಲ್ಲ ಎಂಬ ಉದ್ಧಟತನವಿರುತ್ತದೆ ಎಂಬುದು ಇಲ್ಲಿ ಎದ್ದುಕಾಣುತ್ತದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಕಲಾಮಂದಿರದ ಒಳಗೆ ಮಾಂಸಾಹಾರಸೇವನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…
ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…