Andolana originals

ಓದುಗರ ಪತ್ರ: ವಿವಿಗಳ ವಿಲೀನ ಸ್ವಾಗತಾರ್ಹ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನೂತನವಾಗಿ 9 ವಿಶ್ವವಿದ್ಯಾನಿಲಯಗಳನ್ನು ಸ್ಥಾಪನೆ ಮಾಡಲಾಗಿತ್ತು. ಆದರೆ, ಅವು ಶೈಕ್ಷಣಿಕವಾಗಿ ಹಾಗೂ ಸಂಶೋಧನಾತ್ಮಕವಾಗಿ ಯಾವುದೇ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿಲ್ಲ.
ಹೀಗೆ ಅಭಿವೃದ್ಧಿ ಕಾಣದ ಎಲ್ಲಾ ನೂತನ ವಿಶ್ವವಿದ್ಯಾನಿಲಯಗಳನ್ನು ಮಾತ್ರ ವಿವಿಗಳೊಂದಿಗೆ ವಿಲೀನಗೊಳಿಸಲು ಮುಂದಾಗಿದ್ದು, ಇದು ರಾಜ್ಯದ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಅವರ ಉನ್ನತ ಶಿಕ್ಷಣದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ವಿಶ್ವದ ಅತ್ಯುನ್ನತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾನಿಲಯವನ್ನೂ ಸೇರಿದಂತೆ ಹಲವು ವಿಶ್ವವಿದ್ಯಾನಿಲಯಗಳನ್ನು ಕುಂದಿಸುವ ಪ್ರಯತ್ನದಿಂದಲೋ ಏನೋ ಜಿಲ್ಲೆಗೊಂದು ವಿಶ್ವವಿದ್ಯಾನಿಲಯ ಎಂಬಂತೆ ಯಾವ ಪೂರ್ವಸಿದ್ಧತೆಗಳೂ ಇಲ್ಲದೇ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲಾಯಿತು. ಹೀಗೆ ಜಿಲ್ಲೆಗೊಂದು ವಿಶ್ವವಿದ್ಯಾನಿಲಯ ಸ್ಥಾಪನೆಯಾದ್ದರಿಂದ ಉನ್ನತ ಶಿಕ್ಷಣಕ್ಕೆ ಹಾಗೂ ಹೊಸ ಸಂಶೋಧನೆಗಳಿಗೆ ಅವಕಾಶ ವಿಸ್ತೃತಗೊಳ್ಳಬಹುದು ಎಂದು ಭಾವಿಸಲಾಗಿತ್ತು. ಆದರೆ, ವರ್ಷಗಳು ಕಳೆದ ಬಳಿಕ ಹೊಸ ವಿಶ್ವವಿದ್ಯಾನಿಲಯಗಳ ದುಸ್ಥಿತಿ ಕಂಡು ಬೇಸರವಾಯಿತು. ದೊಡ್ಡ ಸರ್ಕಾರಿ ಕಾಲೇಜುಗಳನ್ನು ವಿಶ್ವವಿದ್ಯಾನಿಲಯಗಳನ್ನಾಗಿಸಿ, ಅಲ್ಲಿ ಕಚೇರಿಗಳನ್ನು ಸ್ಥಾಪಿಸಿ, ರಿಜಿಸ್ಟ್ರಾರ್, ಪರೀಕ್ಷಾಂಗಗಳೆಂದು ಫಲಕಗಳನ್ನು ಅಳವಡಿಸಿದ ಮಾತ್ರಕ್ಕೆ ವಿಶ್ವವಿದ್ಯಾನಿಲಯಗಳಾಗುವುದಿಲ್ಲ. ಅದಕ್ಕೆ ತಕ್ಕಂತೆ ಎಲ್ಲಾ ಸೌಲಭ್ಯಗಳನ್ನೂ ಒದಗಿಸಬೇಕು. ಇದ್ದ ಪಠ್ಯಕ್ರಮಗಳನ್ನೂ ತಿರುಚಿ, ಗೊಂದಲ ಮೂಡಿಸಿದ್ದಲ್ಲದೆ ಅಧಿಕಾರಿಗಳ ನೇಮಕಾತಿಯಲ್ಲೂ ತೊಡಕುಗಳನ್ನು ಮಾಡುತ್ತಿದ್ದರೆ ವಿಶ್ವವಿದ್ಯಾನಿಲಯಗಳು ಬೆಳವಣಿಗೆ ಕಾಣುವುದಾದರೂ ಹೇಗೆ? ಅಲ್ಲದೆ ಈ ನೂತನ ವಿವಿಗಳಲ್ಲಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಯಾವುದೇ ಸೌಲಭ್ಯಗಳೂ ಸರಿಯಾಗಿ ಸಿಗುತ್ತಿರಲಿಲ್ಲ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹೊಸ ವಿಶ್ವವಿದ್ಯಾನಿಲಯಗಳನ್ನು ಮೊದಲಿನ ಹಳೆಯ ವಿಶ್ವವಿದ್ಯಾನಿಲಯಗಳೊಂದಿಗೆ ವಿಲೀನಗೊಳಿಸಲು ಮುಂದಾಗಿರುವುದು ಉತ್ತಮ ನಿರ್ಧಾರ.
-ಡಾ.ಬಿ.ಕೆ.ಪ್ರಮಿಳಾದೇವಿ, ನಿವೃತ್ತ ಸಹ ಪ್ರಾಧ್ಯಾಪಕರು.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

6 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

7 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

7 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

7 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

7 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

8 hours ago