ಓದುಗರ ಪತ್ರ
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. ಸಾರಿಗೆ ನಿಗಮದ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿ ಹಾಕಲು ಸಾಮಾನ್ಯ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುವುದು ಎಷ್ಟು ಸರಿ? ಈಗಾಗಲೇ ಇಂಧನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಮಧ್ಯಮ ವರ್ಗದ ಜನರಿಗೆ ಮೆಟ್ರೋ ಪ್ರಯಾಣ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಿದೆ. ಸಾರ್ವಜನಿಕ ಸಾರಿಗೆಯು ಲಾಭದಾಯಕ ಉದ್ದಿಮೆಯಾಗುವ ಮೊದಲು ಜನಸ್ನೇಹಿಯಾಗಬೇಕಿದೆ. ಸರ್ಕಾರವು ಕೂಡಲೇ ಈ ಪ್ರಸ್ತಾವನೆಯನ್ನು ಹಿಂಪಡೆದು ಜನಸಾಮಾನ್ಯರ ಹಿತ ಕಾಯಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…