Mysore
16
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಓದುಗರ ಪತ್ರ: ಮೈಕ್ರೋ ಫೈನಾನ್ ಕಂಪೆನಿಗಳು ನಿಯಮಗಳನ್ನು ಪಾಲಿಸಲಿ

ಮೈಕ್ರೋ ಫೈನಾನ್ಸ್ ಕಂಪೆನಿಗಳ ಸಿಬ್ಬಂದಿ ಸಾಲ ವಸೂಲಾತಿಯ ವೇಳೆ ಸಾಲ ಪಡೆದವರಿಗೆ ಬೆದರಿಕೆ ಹಾಕುವುದು, ಮನೆಯ ಬಳಿ ಗಲಾಟೆ ಮಾಡಿ ಅವಾಚ್ಯವಾಗಿ ನಿಂದಿಸಿ ವಸೂಲಾತಿಗೆ ಮುಂದಾಗುತ್ತಿದ್ದಾರೆ. ಅಲ್ಲದೆ ಮಹಿಳೆಯರೊಂದಿಗೂ ಅಗೌರವದಿಂದ ವರ್ತಿಸುತ್ತಿದ್ದು, ಅಶ್ಲೀಲ ಪದ ಬಳಕೆ ಮಾಡುತ್ತಿದ್ದಾರೆ. ಇದರಿಂದ ಬೇಸತ್ತು ಸಾಲಗಾರರು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಮೈಕ್ರೋ ಫೈನಾನ್ಸ್ ಕಂಪೆನಿಗಳ ಸಿಬ್ಬಂದಿ ಸಾಲ ವಸೂಲಾತಿಯ ವೇಳೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಅರಿತುಕೊಳ್ಳಬೇಕು. ಸದ್ಯ ರಾಜ್ಯದಲ್ಲಿ ಮ್ರೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಹೆದರಿ ಜನರು ಗ್ರಾಮಗಳನ್ನು ತೊರೆದಿರುವ ಇನ್ನೂ ಕೆಲವರು ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಈ ಸಮಸ್ಯೆ ಬಗೆಹರಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಲು ನಿರ್ಧರಿಸಿದ್ದು, ಇದು ಒಳ್ಳೆಯ ಬೆಳವಣಿಗೆ. ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಮೈಕ್ರೋ ಫೈನಾನ್ಸ್ ಕಂಪೆನಿಗಳು ಚಾಚೂ ತಪ್ಪದೆ ಪಾಲಿಸುವ ಜತಗೆ ಆರ್‌ಬಿಐ ಗೈಡ್‌ಲೈನ್ಸ್ ಗಳನ್ನು ಗಮನದಲ್ಲಿಟ್ಟುಕೊಂಡು ಸಾಲ ವಸೂಲಾತಿ ಮಾಡಲಿ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

Tags:
error: Content is protected !!