ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ ಮಾಡಿಸುತ್ತಿರುವುದನ್ನು ನೋಡಿ ಸಿಟ್ಟಾದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಾಲಕಾರ್ಮಿಕರಿಂದ ದುಡಿಸುವವರನ್ನು ತಕ್ಷಣ ಬಂಧಿಸಿ ಎಂದು ಆದೇಶ ನೀಡಿರುವುದು ಶ್ಲಾಘನೀಯ.
ಅದರಂತೆ ಕೆಲವು ಬಾಲಕಾರ‍್ಮಿಕರನ್ನು ರಕ್ಷಿಸಿ, ನಾಲ್ಕು ಅಂಗಡಿ ಮಾಲೀಕರನ್ನು ಬಂಧಿಸಿರುವ ಪೊಲೀಸರ ಕಾರ್ಯ ಮೆಚ್ಚುವಂತಹದ್ದು. ರೈತರು,ವರ್ತಕರು,ಹಮಾಲಿಗಳ ಸಮಸ್ಯೆ ಆಲಿಸಿ ಎಪಿಎಂಸಿಯಲ್ಲಿನ ಮೂಲ ಸೌಕರ್ಯಗಳ ಕೊರತೆ ಬಗ್ಗೆ ಮನಹರಿಸಿ ಎಂದು ಹೇಳಿರುವುದು, ಕಮಿಷನ್ ವಿಚಾರದಲ್ಲಿ ರೈತರಿಗೆ ಅನ್ಯಾಯವಾಗಬಾರದು ಹಾಗೂ ವರ್ತಕರಿಗೂ ಅನ್ಯಾಯವಾಗಬಾರದು, ಅಧಿಕಾರಿಗಳು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ತಿಳಿಸಿರುವುದು ಸ್ವಾಗತಾರ್ಹ. ಎಲ್ಲ ಸಚಿವರು ತಮ್ಮ ವ್ಯಾಪ್ತಿಗೆ ಬರುವ ಎಪಿಎಂಸಿ ಮಾರುಕಟ್ಟೆಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವತ್ತಾ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿರುವುದು ಒಳ್ಳೆಯದೆ. ಆದರೆ ಅದು ಕಾರ್ಯರೂಪಕ್ಕೆ ಬರಬೇಕು.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…
ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್‌ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…