Mysore
26
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ಓದುಗರ ಪತ್ರ: ಶಾಸಕ ಜಿ.ಟಿ.ದೇವೇಗೌಡರ ನಡೆ ಶ್ಲಾಘನಿಯ

dgp murder case

ಮೈಸೂರಿನ ಕಳಸ್ಥವಾಡಿ ಸಮೀಪದ ವಿರಿಜ ನಾಲೆ ಸಮೀಪ ಇತ್ತೀಚೆಗೆ ನಡೆದ ಅವಘಡದಲ್ಲಿ ತೊಂದರೆಗೊಳಗಾದ ಕಬ್ಬು ಸಾಗಿಸುತ್ತಿದ್ದ ಚಂದ್ರು ಎಂಬ ರೈತನ ಕಷ್ಟಕ್ಕೆ ಸ್ಪಂದಿಸಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಶಾಸಕ ಜಿ. ಟಿ. ದೇವೇಗೌಡರ ಕಾಳಜಿ ನಿಜಕ್ಕೂ ಶ್ಲಾಘಿಸುವಂತಹದ್ದು.

ವಿಷಯ ತಿಳಿದ ತಕ್ಷಣ ಜಿ. ಟಿ. ದೇವೇಗೌಡ ಅವರು ಸ್ಥಳಕ್ಕೆ ಆಗಮನಿಸಿ ರೈತನಿಗೆ ೫೦ ಸಾವಿರ ರೂ. ವೈಯಕ್ತಿಕ ನೆರವು ನೀಡಿ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಬಗ್ಗೆ ತಹಸಿಲ್ದಾರ್ ಜೊತೆ ಮಾತನಾಡಿರುವುದಾಗಿ ಹೇಳಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ಅವರ ಉತ್ತಮ ನಡೆಯಾಗಿದೆ. ಒಬ್ಬ ಜನಪ್ರತಿನಿಧಿ ಜನಸಾಮಾನ್ಯರ ಸಮಸ್ಯೆಗೆ ಹೇಗೆ ಸ್ಪಂದಿಸಬಹುದು ಎಂಬುದಕ್ಕೆ ಇದು ಮಾದರಿಯೂ ಆಗಿದೆ.

-ಬೇಸಗರಹಳ್ಳಿ ರವಿಪ್ರಸಾದ್, ಮೈಸೂರು

Tags:
error: Content is protected !!