Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

ಓದುಗರ ಪತ್ರ: ಸಂಚಲನ ಸೃಷ್ಟಿಸಿದ ಜಿಟಿಡಿ ಹೇಳಿಕೆ

ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯ ವೇಳೆ ಜಾ.ದಳ ಶಾಸಕ ಬಿ.ಟಿ.ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊಗಳಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಎರುದ್ಧ ಬಿಜೆಪಿ-ಜಾ.ದಳ ಮೈತ್ರಿಕೂಟ ಕಿಡಿಕಾರುತ್ತಿದ್ದು, ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ರಾಜ್ಯವೇ ಗಮನಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಪರ ಮಾತನಾಡಿರುವ ಜಿ.ಟಿ.ದೇವೇಗೌಡರು, ‘ಸಿದ್ದರಾಮಯ್ಯ 40 ವರ್ಷಗಳ ಹಿಂದೆಯೇ ಮಂತ್ರಿಯಾಗಿದ್ದವರು. ಸಾಮಾಜಿಕ ಸೇವೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡವರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ, ಎರಡನೇ ಬಾರಿ ಮುಖ್ಯಮಂತ್ರಿಯಾಗಿ ರಾಜಕೀಯ ಅನುಭವ ಹೊಂದಿದ್ದಾರೆ. ಈಗ ತಮ್ಮ ಮೇಲೆ ಬಂದಿರುವ ಮುಡಾ ಹಗರಣದ ಆರೋಪವನ್ನು ಸಮರ್ಥವಾಗಿ ಎದುರಿಸುತ್ತಾರೆ. ತನಿಖೆಗೆ ಆದೇಶವಾಗಿದೆಯೇ ವಿನಾ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದಾಗಲಿ, ಅವರನ್ನು ಜೈಲಿಗೆ ಕಳುಹಿಸಿ ಎಂದಾಗಲಿ ಹೇಳಿಲ್ಲ. ಅಷ್ಟಕ್ಕೂ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಬೇಕು? ಯಾವ ಕಾನೂನು ಅವರು ರಾಜೀನಾಮೆ ನೀಡಬೇಕು ಎಂದಿದೆ? ಎಫ್‌ಐಆರ್ ದಾಖಲಾದವರೆಲ್ಲರೂ ರಾಜೀನಾಮ ಕೊಡಬೇಕು ಎಂದಾದರೆ ಮೊದಲು ಎಚ್.ಡಿ.ಕುಮಾರಸ್ವಾಮಿಯವರು ರಾಜೀನಾಮೆ ಕೊಡಲಿ’ ಎಂದಿದ್ದಾರೆ. ಈ ಹೇಳಿಕೆ ಮೈತ್ರಿಕೂಟದಲ್ಲಿ ಗೊಂದಲ ಸೃಷ್ಟಿಸಿದೆ ಎಂದರೆ ತಪ್ಪಾಗಲಾರದು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೂ, ಜಿ.ಟಿ.ದೇವೇಗೌಡರವರು ಹಲವು ವರ್ಷಗಳಿಂದ ಮುಡಾ ಸದಸ್ಯರಾಗಿದ್ದು, ಅವರಿಗೆ ಸತ್ಯ ಏನೆಂದು ಗೊತ್ತಿದೆ. ನನ್ನ ಮೇಲಿನ ಅಭಿಮಾನಕ್ಕೆ ಅಭಿನಂದನೆಗಳು ಎಂದಿದ್ದಾರೆ. ಇವರಿಬ್ಬರ ಈ ಮಾತುಗಳು ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿರುವುದಂತೂ ಸತ್ಯ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

 

Tags:
error: Content is protected !!