ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯ ವೇಳೆ ಜಾ.ದಳ ಶಾಸಕ ಬಿ.ಟಿ.ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊಗಳಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಎರುದ್ಧ ಬಿಜೆಪಿ-ಜಾ.ದಳ ಮೈತ್ರಿಕೂಟ ಕಿಡಿಕಾರುತ್ತಿದ್ದು, ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ರಾಜ್ಯವೇ ಗಮನಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಪರ ಮಾತನಾಡಿರುವ ಜಿ.ಟಿ.ದೇವೇಗೌಡರು, ‘ಸಿದ್ದರಾಮಯ್ಯ 40 ವರ್ಷಗಳ ಹಿಂದೆಯೇ ಮಂತ್ರಿಯಾಗಿದ್ದವರು. ಸಾಮಾಜಿಕ ಸೇವೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡವರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ, ಎರಡನೇ ಬಾರಿ ಮುಖ್ಯಮಂತ್ರಿಯಾಗಿ ರಾಜಕೀಯ ಅನುಭವ ಹೊಂದಿದ್ದಾರೆ. ಈಗ ತಮ್ಮ ಮೇಲೆ ಬಂದಿರುವ ಮುಡಾ ಹಗರಣದ ಆರೋಪವನ್ನು ಸಮರ್ಥವಾಗಿ ಎದುರಿಸುತ್ತಾರೆ. ತನಿಖೆಗೆ ಆದೇಶವಾಗಿದೆಯೇ ವಿನಾ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದಾಗಲಿ, ಅವರನ್ನು ಜೈಲಿಗೆ ಕಳುಹಿಸಿ ಎಂದಾಗಲಿ ಹೇಳಿಲ್ಲ. ಅಷ್ಟಕ್ಕೂ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಬೇಕು? ಯಾವ ಕಾನೂನು ಅವರು ರಾಜೀನಾಮೆ ನೀಡಬೇಕು ಎಂದಿದೆ? ಎಫ್‌ಐಆರ್ ದಾಖಲಾದವರೆಲ್ಲರೂ ರಾಜೀನಾಮ ಕೊಡಬೇಕು ಎಂದಾದರೆ ಮೊದಲು ಎಚ್.ಡಿ.ಕುಮಾರಸ್ವಾಮಿಯವರು ರಾಜೀನಾಮೆ ಕೊಡಲಿ’ ಎಂದಿದ್ದಾರೆ. ಈ ಹೇಳಿಕೆ ಮೈತ್ರಿಕೂಟದಲ್ಲಿ ಗೊಂದಲ ಸೃಷ್ಟಿಸಿದೆ ಎಂದರೆ ತಪ್ಪಾಗಲಾರದು.
ಮುಖ್ಯಮಂತ್ರಿ ಸಿದ್ದರಾಮಯ್ಯನವರೂ, ಜಿ.ಟಿ.ದೇವೇಗೌಡರವರು ಹಲವು ವರ್ಷಗಳಿಂದ ಮುಡಾ ಸದಸ್ಯರಾಗಿದ್ದು, ಅವರಿಗೆ ಸತ್ಯ ಏನೆಂದು ಗೊತ್ತಿದೆ. ನನ್ನ ಮೇಲಿನ ಅಭಿಮಾನಕ್ಕೆ ಅಭಿನಂದನೆಗಳು ಎಂದಿದ್ದಾರೆ. ಇವರಿಬ್ಬರ ಈ ಮಾತುಗಳು ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿರುವುದಂತೂ ಸತ್ಯ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…