Mysore
26
haze

Social Media

ಗುರುವಾರ, 01 ಜನವರಿ 2026
Light
Dark

ಮೈಸೂರಿಗೆ ಕಪ್ಪು ಚುಕ್ಕೆಯಾದ ಮುಡಾ ಹಗರಣ

1904ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ನಗರವನ್ನು ವ್ಯವಸ್ಥಿತವಾಗಿ ರೂಪಿಸಬೇಕು ಎಂಬುದಕ್ಕಾಗಿ ನಗರ ಅಭಿವೃದ್ಧಿ ವಿಶ್ವಸ್ಥ ಮಂಡಳಿಯನ್ನು ಸ್ಥಾಪಿಸಿದರು. ನಂತರದ ದಿನಗಳಲ್ಲಿ ಅದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವಾಗಿ ಬದಲಾಯಿತು.

ಈಗ ಈ ಪ್ರಾಧಿಕಾರ ಹಗರಣಗಳಲ್ಲಿ ಮುಳುಗಿ ಹೋಗಿರುವುದು ಮೈಸೂರಿಗೆ ಒಂದು ಕಪ್ಪು ಚುಕ್ಕೆಯಾಗಿದೆ. ಮನೆ ನಿರ್ಮಾಣ ಮಾಡಬೇಕು ಎಂಬ ಕನಸು ಕಾಣುವ ಸಾಮಾನ್ಯ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ನಿವೇಶನಗಳನ್ನು ನೀಡಬೇಕಿದ್ದ ನಗರಾಭಿವೃದ್ಧಿ ಪ್ರಾಧಿಕಾರ ಈಗ ಉಳ್ಳವರಿಗೆ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಸಿಲುಕಿದೆ. ಮುಡಾ ಹೊಸ ಹೊಸ ಬಡಾವಣೆಗಳನ್ನು ನಿರ್ಮಿಸಿ ಜನಸಾಮಾನ್ಯರ ಕೈಗೆಟುಕುವ ದರದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಬೇಕಿತ್ತು. ಆದರೆ, ಮುಡಾ ಹಗರಣಗಳನ್ನು ಗಮನಿಸಿದರೆ ಸಾಮಾನ್ಯ ಜನರಿಗೆ ನಿವೇಶನಗಳು ಸಿಗುವುದು ಕನಸಿನ ಮಾತು ಅನಿಸುತ್ತದೆ.

ಮುಡಾದಲ್ಲಿ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳು ಮುಡಾವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು, ಅಕ್ರಮವೆಸಗಿದ್ದಾರೆ ಎನ್ನಲಾಗಿದೆ. ಆದ್ದರಿಂದ ಈ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಸಿ ಅಕ್ರಮವೆಸಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

Tags:
error: Content is protected !!