Andolana originals

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦ ತ್ಯಾಜ್ಯ ಮುಕ್ತ ತಾಣಗಳು ಕಾರ್ಯಕ್ರಮದ ಭಾಗವಾಗಿ ಫೈವ್ ಲೈಟ್ ಸರ್ಕಲ್ ಸಮೀಪದ ದಾವೂದ್ ಖಾನ್ ರಸ್ತೆಯಲ್ಲಿದ್ದ ಕಸ ಹಾಕುವ ತಾಣವನ್ನು ಸ್ವತಃ ಮಹಾನಗರಪಾಲಿಕೆ ಆಯುಕ್ತರಾದ ಎಂ. ಕೆ. ಸವಿತಾ ಅವರೇ ನೇತೃತ್ವ ವಹಿಸಿ,ಸ್ವಚ್ಛಗೊಳಿಸಿ ತ್ಯಾಜ್ಯ ಮುಕ್ತತಾಣವನ್ನಾಗಿ ಪರಿವರ್ತಿಸಿರುವುದು ಶ್ಲಾಘನೀಯ.

ಇದೇ ವೇಳೆ ಆಯುಕ್ತರು ತ್ಯಾಜ್ಯದ ರಾಶಿ ಇದ್ದ ತಾಣಕ್ಕೆ ತೆರಳಿ ಹಸಿ ಕಸ,ಒಣ ಕಸವನ್ನು ಬೇರ್ಪಡಿಸಿ,ಪ್ರತ್ಯೇಕ ಡಬ್ಬಿಗಳಲ್ಲಿ ತುಂಬಿಸಿದ ನಂತರ ಕಸದ ರಾಶಿಯಿಂದ ಕೂಡಿದ್ದ ರಸ್ತೆಯನ್ನು ಸ್ವಚ್ಛಗೊಳಿಸಿ, ಈ ತಾಣದಲ್ಲಿ ಮತ್ತೆ ತ್ಯಾಜ್ಯ ಸುರಿಯದಂತೆ ನಿರಂತರ ಮೇಲ್ವಿಚಾರಣೆ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಹೇಳಿರುವುದು ಮೆಚ್ಚುವಂತಹದ್ದು. ಮಹಾನಗರ ಪಾಲಿಕೆ ವ್ಯಾಪ್ತಿ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸ್ವಚ್ಛತಾ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಂಡರೆ ಮೈಸೂರು ಮತ್ತೆ ದೇಶದ ನಂಬರ್ ಒನ್ ಸ್ವಚ್ಛನಗರ ಪ್ರಶಸ್ತಿ ಗಳಿಸುವುದರಲ್ಲಿ ಸಂಶಯವಿಲ್ಲ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

 

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago