Andolana originals

ಓದುಗರ ಪತ್ರ: ಮೈಸೂರು ವರ್ತುಲ ರಸ್ತೆಗೆ ಎಸ್‌ಎಂ ಕೃಷ್ಣ ಹೆಸರಿಡಿ

ಮೈಸೂರಿನಲ್ಲಿ ವರ್ತುಲ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರು ಉಪಯೋಗಿಸಲು ಕಾರಣೀಭೂತರಾದ ಮಾಜಿ ಮುಖ್ಯಮಂತ್ರಿ ದಿವಂಗತ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರ ಹೆಸರನ್ನು ವರ್ತುಲ ರಸ್ತೆಗೆ ನಾಮಕರಣ ಮಾಡಲು ೨೦೧೧ರಲ್ಲೇ ಮೈಸೂರು ಮಹಾನಗರ ಪಾಲಿಕೆ ನಿರ್ಣಯ ಮಾಡಿದ್ದರೂ ಇದುವರೆವಿಗೆ ಅನುಷ್ಠಾನ ಆಗದಿರುವುದು ದುರಂತವೇ ಸರಿ. ದೂರದೃಷ್ಟಿ ವ್ಯಕ್ತಿತ್ವ ಹೊಂದಿದ್ದ ಎಸ್. ಎಂ. ಕೃಷ್ಣ ಅವರು ಮೈಸೂರಿನ ಅಭಿವೃದ್ಧಿ ಬಗ್ಗೆ ವಿಶೇಷ ಕಾಳಜಿ ಉಳ್ಳವರಾಗಿದ್ದರು ಎಂಬುದಕ್ಕೆ ವರ್ತುಲ ರಸ್ತೆ ನಿರ್ಮಾಣಕ್ಕೆ ೨೦೦೩ರಲ್ಲೇ ಚಾಲನೆ ನೀಡಿ, ಅಗತ್ಯ ಅನುದಾನದ ಜೊತೆಗೆ ಎಲ್ಲಾ ರೀತಿಯ ನೆರವು ನೀಡಿರುವುದೇ ಸಾಕ್ಷಿಯಾಗಿದೆ. ಮೈಸೂರು ಮಹಾ ನಗರಪಾಲಿಕೆ ನಿರ್ಣಯ ಕೈಗೊಂಡಿರುವಂತೆ ಎಸ್. ಎಂ. ಕೃಷ್ಣ ಅವರ ಹೆಸರನ್ನು ಈಗಲಾದರೂ ಅಂತಿಮಗೊಳಿಸುವುದು ಸೂಕ್ತ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

 

andolana

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

3 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

3 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

3 hours ago