ಓದುಗರ ಪತ್ರ
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸದ್ಯ, ದೇಶದಲ್ಲಿ ಒಟ್ಟಾರೆಯಾಗಿ ೮೦ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಗಳು ಇದ್ದು, ಹಲವಾರು ಮೈದಾನಗಳಿಗೆ ಅದ್ವಿತೀಯ ಸಾಧನೆ ತೋರಿರುವ ಅಂದಿನ ಜವಾಹರ್ ಲಾಲ್ ನೆಹರು ಅವರಿಂದ ಹಿಡಿದು ಪ್ರಧಾನಿ ನರೇಂದ್ರ ಮೋದಿವರೆಗೂ ರಾಷ್ಟ್ರ ನಾಯಕರ ಹೆಸರುಗಳನ್ನು ಇಡಲಾಗಿದೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಕ್ರಿಕೆಟ್ ಕ್ರೀಡೆಗೆ ಸಂಬಂಧಿಸಿದ ಒಂದೇ ಒಂದು ಅಂತಾರಾಷ್ಟ್ರೀಯ ಕ್ರೀಡಾಂಗಣವಿಲ್ಲ. ಆದ ಕಾರಣ, ರಾಜ್ಯದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಳ್ಳಲಿರುವ ವಿಶ್ವ ದರ್ಜೆಯ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರ ಡಾ.ಅಂಬೇಡ್ಕರ್ ಅವರ ಹೆಸರು ಇಡುವ ಮೂಲಕ ಸಾಮಾಜಿಕ ನ್ಯಾಯದ ಪರ ತಮ್ಮ ಜೀವನ ಪರ್ಯಂತ ಹೋರಾಡಿದ ದಿವ್ಯ ಚೇತನ ಬಾಬಾ ಸಾಹೇಬರಿಗೆ ಗೌರವ ತೋರುವುದು ಅಗತ್ಯ.
– ಅನಿಲ್ ಕುಮಾರ್, ನಂಜನಗೂಡು
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…