ಓದುಗರ ಪತ್ರ
ಇತ್ತೀಚೆಗೆ ಅಶ್ಲೀಲ ವೆಬ್‌ಸೈಟ್‌ಗಳ ಮೇಲೆ ನಿಷೇಧ ಹೇರಬೇಕೆಂಬ ಮನವಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯವು, ಆನ್‌ಲೈನ್ ಅಶ್ಲೀಲತೆ ನಿಯಂತ್ರಣದ ಅಗತ್ಯವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅಪ್ರಾಪ್ತರು ಇದಕ್ಕೆ ಒಳಗಾಗುವ ಅಪಾಯ ಅತ್ಯಂತ ಗಂಭೀರ ವಿಷಯವಾಗಿದ್ದು, ಅದನ್ನು ನಿರ್ಲಕ್ಷಿಸಲಾಗದು. ಕೇಂದ್ರ ಸರ್ಕಾರವು ಡಿಜಿಟಲ್ ಸುರಕ್ಷತೆ ಮತ್ತು ಜಾಗೃತಿ ನೀತಿ ರೂಪಿಸಬೇಕಾಗಿದ್ದು, ಅದರಲ್ಲಿ ತಾಂತ್ರಿಕ ನಿಯಂತ್ರಣ, ಡಿಜಿಟಲ್ ಸಾಕ್ಷರತೆ ಮತ್ತು ಪೋಷಕರ ಸಬಲಿಕರಣ ಮುಖ್ಯ ಅಂಶಗಳಾಗಿರಬೇಕು.
ಅಪ್ರಾಪ್ತರು ಬಳಸುವ ಡಿಜಿಟಲ್ ಸಾಧನಗಳಲ್ಲಿ ಕಡ್ಡಾಯವಾಗಿ ವಿಷಯ ಶೋಧಕ ವ್ಯವಸ್ಥೆ ಇರಬೇಕು. ಜೊತೆಗೆ, ವಯಸ್ಸು ದೃಢೀಕರಿಸುವ ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆ ಹಾಗೂ ಇಂಟರ್ನೆಟ್ ಸೇವಾದಾತರ ಸಹಯೋಗದ ಮೂಲಕ ಅಶ್ಲೀಲ ವಿಷಯಗಳ ಪ್ರವೇಶವನ್ನು ತಡೆಹಿಡಿಯ ಬೇಕು. ಅದರ ಜೊತೆಗೆ, ಶಾಲಾ ಪಠ್ಯಕ್ರಮದಲ್ಲೇ ಡಿಜಿಟಲ್ ಶಿಕ್ಷಣವನ್ನು ಅಳವಡಿಸಿ ಮಕ್ಕಳಲ್ಲಿ ಆರೋಗ್ಯಕರ ಮಾಹಿತಿ ಮತ್ತು ಹಾನಿಕಾರಕ ವಿಷಯಗಳ ನಡುವಿನ ವ್ಯತ್ಯಾಸಗಳ ಕುರಿತು ಅರಿವು ಮೂಡಿಸುವುದು ಅವಶ್ಯ.
– ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…