Andolana originals

ಓದುಗರ ಪತ್ರ| ತರಾತುರಿಯಲ್ಲಿ ಮೀಸಲಾತಿ ಪ್ರಕಟಿಸುವ ಅಗತ್ಯವಿತ್ತೇ?

ರಾಜ್ಯದ ಹತ್ತು ನಗರ ಪಾಲಿಕೆಗಳಿಗೆ ಮೇಯರ್ ಮತ್ತು ಉಪ ಮೇಯ‌ರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಎಲ್ಲ ನಗರ ಪಾಲಿಕೆ ಗಳಿಗೂ ಚುನಾವಣೆ ಯಾವಾಗ ನಡೆಯುತ್ತದೆ ಎಂಬುದೇ ತಿಳಿದಿಲ್ಲ. ಅಲ್ಲದೆ ಸದ್ಯಕ್ಕೆ ಚುನಾವಣೆ ನಡೆಸುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಒಂದು ವೇಳೆ ಚುನಾವಣೆ ನಡೆದರೂ ಮೇಯರ್ ಮತ್ತು ಉಪ ಮೇಯರ್‌ಗಳು ಆಯ್ಕೆಯಾಗಲು ಕನಿಷ್ಠವೆಂದರೂ 6-7 ತಿಂಗಳುಗಳಾದರೂ ಬೇಕು.

ಹೀಗಿರುವಾಗ ರಾಜ್ಯ ಸರ್ಕಾರಕ್ಕೆ ತರಾತುರಿಯಲ್ಲಿ ಮೇಯರ್ ಮತ್ತು ಉಪಮೇಯರ್ ಸ್ಥಾನಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸುವ ಅನಿ ವಾರ್ಯವೇನಿತ್ತು? ಎಂಬ ಪ್ರಶ್ನೆ ಮೂಡಿದ್ದು, ಇದರಲ್ಲಿ ರಾಜಕೀಯ ಉದ್ದೇಶ ವಿರಬಹುದು ಎಂಬ ಅನುಮಾನ ಕಾಡುತ್ತಿದೆ. ಚುನಾವಣೆಗೆ ಇನ್ನೂ ಸಾಕಷ್ಟು ತಿಂಗಳುಗಳು ಬಾಕಿ ಇರುವಾಗಲೇ ಮೀಸಲಾಯಿತಿಯನ್ನು ಪ್ರಕಟಿಸಿರುವುದರಿಂದ ಜನರು ಗೊಂದಲಕ್ಕೀಡಾಗಿದ್ದು, ಇದು ಈಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರ ವಿರಬಹುದೇನೋ ಅನಿಸುತ್ತದೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

2 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

3 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

6 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

6 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

6 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

7 hours ago