ಹಿಂದೂ ಧರ್ಮೀಯರ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಚಾಮುಂಡಿಬೆಟ್ಟವೂ ಒಂದಾಗಿದ್ದು, ನಿತ್ಯ ನೂರಾರು ಭಕ್ತರು ಇಲ್ಲಿಗೆ ಭೇಟಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ.
ಚಾಮುಂಡಿಬೆಟ್ಟ ಧಾರ್ಮಿಕ ಕ್ಷೇತ್ರ ಮಾತ್ರವಲ್ಲದೆ, ಒಂದು ಪ್ರವಾಸಿ ತಾಣವೂ ಹೌದು. ಇಲ್ಲಿಗೆ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಸದ್ಯ ಮೈಸೂರಿನಲ್ಲಿ ನವರಾತ್ರಿ ಉತ್ಸವ ಆರಂಭಗೊಂಡಿದ್ದು, ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಇದರಿಂದಾಗಿ ಪ್ರಾಧಿಕಾರವು ಭಕ್ತರಿಗೆ ಅನುಕೂಲವಾಗಲಿ ಎಂದು ಸೆಪ್ಟೆಂಬರ್ 5ರಿಂದಲೇ ರಾತ್ರಿ ವೇಳೆಯಲ್ಲಿಯೂ ಅನ್ನ ದಾಸೋಹ ನೀಡಲು ಪ್ರಾರಂಭಿಸಿದ್ದು, ಇದೊಂದು ಉತ್ತಮ ಬೆಳವಣಿಗೆಯಾಗಿದೆ.
ಮಹದೇಶ್ವರ ಬೆಟ್ಟದಲ್ಲಿಯೂ ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ವೇಳೆ ಭಕ್ತರಿಗೆ ದಾಸೋಹ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿಯೇ ಈಗ ಚಾಮುಂಡಿಬೆಟ್ಟದಲ್ಲಿಯೂ ಅನ್ನ ದಾಸೋಹ ನೀಡುತ್ತಿರುವುದು ಭಕ್ತರಿಗೆ ಅನುಕೂಲವಾಗಲಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.





