ಬಂಡೀಪುರ ಉಷ್ಟ್ರೀಯ ಉದ್ಯಾನದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧವನ್ನು ರಾಜಕೀಯ ಮುಖಂಡರ ಒತ್ತಡಕ್ಕೆ ಮಣಿಯದೇ ಯಥಾಸ್ಥಿತಿಯಲ್ಲಿಯೇ ಮುಂದುವರಿಸುವುದು ಅಗತ್ಯವಾಗಿದೆ. ಬಂಡೀಪುರ ರಾಷ್ಟ್ರೀಯ ದಾರಿಯಲ್ಲಿ ರಾತ್ರಿ ಸಮಯದಲ್ಲಿ ವಾಹನಗಳಿಗೆ ಅವಕಾಶ ಮಾಡಿಕೊಟ್ಟರೇ ವನ್ಯ ಪ್ರಾಣಿಗಳ ಜೀವಕ್ಕೆ ಎರವಾಗುವುದಲ್ಲದೇ ಕಳ್ಳತನ, ಸುಲಿಗೆ ಮೊದಲಾದ ಅಪರಾಧ ಪ್ರಕರಣಗಳಿಗೂ ಅವಕಾಶ ನೀಡಿದಂತಾಗುತ್ತದೆ. ಸರ್ಕಾರ ಈ ಬಗ್ಗೆ ಗಮನಹರಿಸುವುದು ಒಳಿತು.
ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ ಎಚ್.ಡಿ.ಕೋಟೆ ತಾಲ್ಲೂಕು





