ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಲಿಂಗಾಂಬುಧಿ ಕೆರೆಯ ಸಮೀಪದ ಸಸ್ಯೋದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಇಲ್ಲಿ ಯಾವುದೇ ಡಿಜಿಟಲ್ ಸೌಲಭ್ಯವಿಲ್ಲದಿರುವುದರಿಂದ ಬರುವ ಪ್ರವಾಸಿಗರು ಹಣ ನೀಡಿಯೇ ಟಿಕೆಟ್ ಪಡೆಯ ಬೇಕು.
ಇದರಿಂದಾಗಿ ಅನೇಕ ಪ್ರವಾಸಿಗರಿಗೆ ತೊಂದರೆ ಯಾಗುತ್ತಿದೆ. ಇನ್ನು ಇಲ್ಲಿ ನಾವು ಪ್ರವೇಶ ಮಾಡುವ ಸಮಯ ಒಂದಾಗಿದ್ದರೆ ಅವರು ಟಿಕೆಟ್‌ನಲ್ಲಿ ನಮೂದಿಸುವ ಸಮಯವೇ ಬೇರೆಯಾಗಿರುತ್ತದೆ. ಇದು ಹೇಗೆ ಎಂದು ನೋಡಿದಾಗ, ಅಲ್ಲಿ ನಮಗೆ ನೀಡಿದ ಟಿಕೆಟನ್ನು ವಾಪಸ್ ಪಡೆದು ಬೇರೆ ಪ್ರವಾಸಿಗರೂ ಅದೇ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ ಎಂಬುದು ತಿಳಿಯಿತು. ಈ ಬಗ್ಗೆ ಪ್ರಶ್ನಿಸಿದರೆ ಅಲ್ಲಿನ ಸಿಬ್ಬಂದಿ ಏರುಧ್ವನಿಯಲ್ಲಿ ಮಾತನಾಡುತ್ತಾರೆ.
ಒಂದೇ ಟಿಕೆಟನ್ನು ಪದೇ ಪದೇ ಮಾರಾಟ ಮಾಡಿ ಹಣ ಗಳಿಸುತ್ತಿರುವುದು ವಂಚನೆಯಲ್ಲವೇ? ದಸರಾ ಎಂದರೆ ಅಕ್ರಮ ವಾಗಿ ಹಣ ಗಳಿಸಲು ಇರುವ ಮಾರ್ಗವೇ? ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದರೆ ಅಲ್ಲಿನ ಸಿಬ್ಬಂದಿ ಜಗಳಕ್ಕೆ ಬರುತ್ತಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ಹಾಗೂ ದಸರಾ ಆಚರಣಾ ಸಮಿತಿ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಬೇಕಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ವಿ. ಗುರುದತ್ತ, ಮೈಸೂರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…