ಓದುಗರ ಪತ್ರ
ಮಂಡ್ಯ ನಗರದ ಕೆ.ವಿ.ಶಂಕರಗೌಡ ರಸ್ತೆಯು ಮೈಸೂರು-ಬೆಂಗಳೂರು ಹೆದ್ದಾರಿ ಮತ್ತು ಬನ್ನೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿದೆ. ಇಲ್ಲಿ ಫುಟ್‌ಪಾತ್‌ಇಲ್ಲದೇ ಪಾದಚಾರಿಗಳು ಸಂಚರಿಸಲು ತೀವ್ರ ತೊಂದರೆಯಾಗಿದೆ.
ಈ ಮಾರ್ಗದಲ್ಲಿ ಸರ್ಕಾರಿ ಮಹಾವಿದ್ಯಾಲಯ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಕಚೇರಿಗಳಿವೆ. ಜನತಾ ಶಿಕ್ಷಣ ಸಂಸ್ಥೆಯ ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜು, ಪಿ.ಇ.ಎಸ್.ಪದವಿಪೂರ್ವ ಕಾಲೇಜು, ಶಂಕರಗೌಡ ಮಹಾಶಿಕ್ಷಣ ವಿದ್ಯಾಲಯ, ಜನತಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರ ನಿಲಯಗಳು, ಜನತಾ ಶಿಕ್ಷಣ ಸಂಸ್ಥೆಯ ಕ್ರೀಡಾ ಸಮುಚ್ಚಯವಿದೆ. ಬ್ಯಾಂಕ್ ಹಾಗೂ ಸರ್ಕಾರಿ ಬಾಲಕ -ಬಾಲಕಿಯರ ವಿದ್ಯಾರ್ಥಿ ನಿಲಯಗಳಿವೆ, ಜನತಾ ಶಿಕ್ಷಣ ಟ್ರಸ್ಟಿನ ಕ್ರೀಡಾ ಸಮುಚ್ಚಯ ವಿಭಾಗದ ಮಾರ್ಗದಲ್ಲಿ ಮುಂಜಾನೆ ಹಾಗೂ ಸಂಜೆ ವೇಳೆ ಮಂಡ್ಯದ ಹಿರಿಯ ನಾಗರಿಕರು ವಾಯುವಿಹಾರಕ್ಕಾಗಿ ಇಲ್ಲಿಗೆ ಬರುತ್ತಾರೆ. ಶಂಕರಗೌಡ ರಸ್ತೆಯ ಎರಡೂ ಬದಿಗಳಲ್ಲಿ ಜಾಗವಿದ್ದರೂ ಅಲ್ಲಿ ಕೊರಕಲು ಬಿದ್ದಿರುವುದರಿಂದ ಅನಿವಾರ್ಯವಾಗಿ ವಾಹನಗಳು ಸಂಚರಿಸುವ ಮಾರ್ಗದಲ್ಲೇ ನಡೆದು ಹೋಗುವ ಪರಿಸ್ಥಿತಿ ಉಂಟಾಗಿದೆ. ಇಲ್ಲಿ ವಾಹನ ಸಂಚಾರ ಅಧಿಕವಾಗಿರುವುದರಿಂದ ಪಾದಚಾರಿಗಳಿಗೆ ಅಪಾಯ ತಪ್ಪಿದ್ದಲ್ಲ. ಸಣ್ಣಪುಟ್ಟ ಅಪಘಾತಗಳು ನಡೆದಿವೆ. ಆದ್ದರಿಂದ ಈ ಮಾರ್ಗದಲ್ಲಿ ಆಧುನಿಕ ರೀತಿಯಲ್ಲಿ ಪಾದಚಾರಿಗಳಿಗಾಗಿ ಸ್ಥಳಾವಕಾಶ ಒದಗಿಸಿ ಎರಡು ಬದಿಯಲ್ಲೂ ಕಂಬಿಗಳನ್ನು ಅಳವಡಿಸುವ ಮೂಲಕ ನಾಗರಿಕರಿಗೆ ಅನುಕೂಲ ಕಲ್ಪಿಸಬೇಕು.
-ಸಿ.ಸಿದ್ದರಾಜು, ಆಲಕೆರೆ, ಮಂಡ್ಯ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕವು ಗ್ರಾಮೀಣ ಭಾಗದ ಬಡ ಮತ್ತು ಮಧ್ಯಮ ವರ್ಗದ…
ನವದೆಹಲಿ: ‘ನಾನು ತೆರಿಗೆ ಕಟ್ಟುವುದನ್ನು ನಿಲ್ಲಿಸಬೇಕೇ?’ ಹೀಗೊಂದು ಪ್ರಶ್ನೆ ಎತ್ತಿದ್ದಾರೆ ಲಡಾಖ್‌ನ ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್. ತಮ್ಮ ಬಂಧನ…
ನ್ಯೂಯಾರ್ಕ್: ಭಾರತ ಆರ್ಥಿಕ ವಿಪತ್ತಿನ ಅಂಚಿನಲ್ಲಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನವೆಂಬರ್ 17ರಂದು ನ್ಯೂಯಾರ್ಕ್‌ನ…
ನಾಗರಹೊಳೆ: ರಸ್ತೆ ಬದಿಯಲ್ಲಿ ಕಾಡಾನೆ ಕಾಣುತ್ತಿದ್ದಂತೆ ಸ್ಕೂಟರ್ ನಿಲ್ಲಿಸಿದ ಇಬ್ಬರು ಸವಾರರಲ್ಲಿ ಓರ್ವ ಹಿಂಬದಿ ಸವಾರ ಕೆಳಗಿಳಿದು ಆನೆಯತ್ತ ಕಲ್ಲೆಸೆದಿದ್ದಾನೆ.…
ಹನೂರು: ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಲಾದರ್ ದೊಡ್ಡಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ…