Andolana originals

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಾರೆ. ಆದರೆ ಕಾಲೇಜಿನ ಕ್ರೀಡಾಂಗಣವನ್ನು ಇತ್ತೀಚಿನ ದಿನಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನೀಡುತ್ತಿರುವುದರಿಂದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ ನಡೆಸಲು ತೀವ್ರ ತೊಂದರೆಯಾಗಿದೆ.

ಕ್ರೀಡಾಂಗಣವನ್ನು ಕಾರ್ಯಕ್ರಮಗಳಿಗೆ ಬಾಡಿಗೆ ಪಡೆಯುವ ಸಂಘ ಸಂಸ್ಥೆಗಳು ದೊಡ್ಡ ಸ್ಪೀಕರ್‌ಗಳನ್ನು ಅಳವಡಿಸಿ ಕಾರ್ಯಕ್ರಮಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತದೆ. ಕೆಲವೊಮ್ಮೆ ಕಾರ್ಯಕ್ರಮಗಳಿಗೆ ವಾಹನದಲ್ಲಿ ಬರುವವರು ಕಾಲೇಜು ಆವರಣದಲ್ಲೇ ವಾಹನಗಳನ್ನು ನಿಲುಗಡೆ ಮಾಡುವುದರಿಂದ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ತಮ್ಮ ವಾಹನಗಳನ್ನು ನಿಲುಗಡೆ ಮಾಡಲು ಹಾಗೂ ಓಡಾಡಲೂ ಜಾಗವಿಲ್ಲದಂತಾಗಿದೆ.

ಕಾರ್ಯಕ್ರಮದ ನಂತರ ಊಟ ಮಾಡಿದ ತಟ್ಟೆ, ಕುಡಿಯುವ ನೀರಿನ ಲೋಟಗಳನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದ ಕ್ರೀಡಾಚಟುವಟಿಕೆ ನಡೆಸುವ ವಿದ್ಯಾರ್ಥಿಗಳು ಹಾಗೂ ಪ್ರತಿನಿತ್ಯ ವಾಯು ವಿಹಾರ ನಡೆಸುವ ಸಾರ್ವಜನಿಕರಿಗೂ ಇದರಿಂದ ತೊಂದರೆಯಾಗಿದೆ. ಮೈಸೂರು ವಿಶ್ವವಿದ್ಯಾನಿಲಯದ ಸಂಬಂಧಪಟ್ಟ ಅಽಕಾರಿಗಳು ಕ್ರೀಡಾಂಗಣವನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಬಾಡಿಗೆಗೆ ನೀಡದೇ ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಮೀಸಲಿಡಲು ಕ್ರಮ ಕೈಗೊಳ್ಳಬೇಕು.

– ವಿ.ಬಬಿತ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು

 

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

2 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

2 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

2 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

3 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

6 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

12 hours ago