ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು ಹೋಳಿಗೆ ಅಂಗಡಿಗಳಿದ್ದು, ಇಲ್ಲಿಗೆ ದ್ವಿಚಕ್ರ ವಾಹನದಲ್ಲಿ ಬರುವ ಗ್ರಾಹಕರು ತಮ್ಮ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಪೊಲೀಸ್ ಇಲಾಖೆಯವರು ಪ್ರಮುಖ ವೃತ್ತ ಹಾಗೂ ಸಿಗ್ನಲ್ ದೀಪಗಳು ಇರುವ ಸ್ಥಳಗಳಲ್ಲಿ ಸುಮಾರು ನೂರು ಮೀಟರ್ಗಳವರೆಗೆ ವಾಹನ ನಿಲುಗಡೆಯನ್ನು ರದ್ದು ಪಡಿಸಬೇಕು. ಸುಗಮಸಂಚಾರಕ್ಕೆ ಅಡ್ಡಿಯುಂಟುಮಾಡುತ್ತಿರುವ ಅಂಗಡಿಗಳ ಮಾಲೀಕರಿಗೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆಯ ನೋಟಿಸ್ ನೀಡುವ ಮೂಲಕ ವಾಹನ ಸವಾರರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ ಮೈಸೂರು




