Andolana originals

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸದ ಎಸ್ಕಲೇಟರ್

ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ ಪ್ಲಾಟ್ ಫಾರ್ಮ್‌ಗಳಿಗೆ, ಪ್ರಯಾಣಿಕರು ಹೋಗಲು, ಹಿರಿಯ ನಾಗರಿಕರು ಹೆಂಗಸರು ಮಕ್ಕಳು ಈ ಎಸ್ಕಲೇಟರ್‌ನ್ನು ಉಪಯೋಗಿಸುತ್ತಾರೆ. ಆದರೆ ದಿನದ ಬಹುಪಾಲು ಸಮಯದಲ್ಲಿ ಈ ಎಸ್ಕಲೇಟರ್ ಚಾಲನೆಯಲ್ಲಿರುವುದಿಲ್ಲ. ಬೆಳಿಗ್ಗೆ ಒಂದೆರಡು ಗಂಟೆಗಳ ಕಾಲ ಮಾತ್ರ ಕಾರ್ಯನಿರ್ವಹಿಸುತ್ತದೆ. ಇದರಿಂದಾಗಿ, ಹಿರಿಯ ನಾಗರಿಕರು, ಹೆಂಗಸರು, ಮಕ್ಕಳು ಹಂತಗಳನ್ನು ಹತ್ತಿಯೇ ಹೋಗಬೇಕು. ಇದರಿಂದಾಗಿ ಕೆಲವು ಸಲ ರೈಲುಗಳನ್ನು ಸರಿಯಾದ ಸಮಯಕ್ಕೆ ಹಿಡಿಯಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಈ ಎಸ್ಕಲೇಟರ್‌ನ ಕೀ ಇಲ್ಲಿನ ಕಾವಲುಗಾರನ ಬಳಿ ಇರುತ್ತದೆ. ಆತ ಕಾಫಿ -ಟೀ ಗೆ ಹೋದಾಗ ಈ ಸಮಸ್ಯೆ ಇದೆ ಎನ್ನುತ್ತಾರೆ. ಆದರೆ ಇತ್ತೀಚೆಗೆ ಈ ಎಸ್ಕಲೇಟರ್ ಸರಿಯಾಗಿ ಚಾಲನೆಯಲ್ಲಿರುವುದಿಲ್ಲ, ದಿನದ ೨೪ ಗಂಟೆಯೂ ಈ ಎಸ್ಕಲೇಟರ್ ಚಾಲನೆಯಲ್ಲಿ ಇರುವಂತೆ ರೈಲ್ವೆ ಅಽಕಾರಿಗಳು ಕ್ರಮಕೈಗೊಳ್ಳಬೇಕು.

 -ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago