ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ ಕುಳಿತು ವಿಶ್ವದ ಯಾವುದೇ ಮೂಲೆಯ ಸಿನಿಮಾವನ್ನು ನೋಡುವ ಅವಕಾಶ ಸಿಕ್ಕಿದೆ. ಆದರೆ ಬೇಸರದ ಸಂಗತಿ ಎಂದರೆ ಬಹುತೇಕ ಎಲ್ಲ ಒಟಿಟಿ ವೇದಿಕೆಗಳು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಿಗೆ ನೀಡುವಷ್ಟು ಪ್ರಾಮುಖ್ಯತೆಯನ್ನು ಸ್ಥಳೀಯ ಭಾಷೆಗಳಿಗೆ, ಅದರಲ್ಲೂ ನಮ್ಮ ಕನ್ನಡ ಭಾಷೆಗೆ ನೀಡುತ್ತಿಲ್ಲ.
ಕರ್ನಾಟಕದಲ್ಲಿ ಕೋಟ್ಯಂತರ ಕನ್ನಡಿಗರು ಈ ವೇದಿಕೆಗಳಿಗೆ ಪ್ರತಿ ತಿಂಗಳು ಹಣ ಪಾವತಿಸಿ ಚಂದಾದಾರರಾಗಿzರೆ. ಆದರೆ ಅವರಿಗೆ ತಮ್ಮ ಮಾತೃಭಾಷೆಯಲ್ಲಿ ನೋಡಲು ಸಿಗುವ ಚಿತ್ರಗಳು ಅತ್ಯಂತ ಕಡಿಮೆ. ಹೀಗಾಗಿ ಎಲ್ಲ ಪರಭಾಷಾ ಚಿತ್ರಗಳಿಗೂ ಕನ್ನಡದಲ್ಲಿ ಡಬ್ಬಿಂಗ್ ಮತ್ತು ಉಪಶೀರ್ಷಿಕೆ ಕಡ್ಡಾಯವಾಗಬೇಕಿದೆ. ಇಂದು ಒಂದು ಮಲಯಾಳಂ, ತಮಿಳು, ತೆಲುಗು ಅಥವಾ ಹಿಂದಿ ಭಾಷೆಯ ಉತ್ತಮ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾದರೆ, ಅದಕ್ಕೆ ಇಂಗ್ಲಿಷ್ ಸಬ್‌ಟೈಟಲ್ ಇರುತ್ತದೆ, ಹಿಂದಿ ಡಬ್ಬಿಂಗ್ ಇರುತ್ತದೆ. ಆದರೆ ಕನ್ನಡ ಡಬ್ಬಿಂಗ್ ಇರುವುದಿಲ್ಲ.
ಒಟಿಟಿಗಳಲ್ಲಿ ಕನ್ನಡಕ್ಕೆ ಆದ್ಯತೆ ಕೊಡುವುದು ಕೇವಲ ಮನರಂಜನೆಯ ಪ್ರಶ್ನೆಯಲ್ಲ, ಅದು ನಮ್ಮ ಅಸ್ಮಿತೆಯ ಪ್ರಶ್ನೆ. ಪ್ರತಿ ಚಿತ್ರವನ್ನೂ ಕನ್ನಡಕ್ಕೆ ಡಬ್ ಮಾಡಿದಾಗ, ನೂರಾರು ಕನ್ನಡದ ಡಬ್ಬಿಂಗ್ ಕಲಾವಿದರು, ಬರಹಗಾರರು, ತಂತ್ರಜ್ಞರಿಗೆ ಉದ್ಯೋಗ ಸಿಗುತ್ತದೆ. ಇದು ಕನ್ನಡ ಚಿತ್ರರಂಗದ ಆರ್ಥಿಕ ಸಬಲೀಕರಣಕ್ಕೂ ಸಹಕಾರಿ. ಆದ್ದರಿಂದ ಎ ಒಟಿಟಿ ಕಂಪೆನಿಗಳ ವ್ಯವಸ್ಥಾಪಕರು ಈ ಕೂಡಲೇ ಎಚ್ಚೆತ್ತುಕೊಂಡು ಕನ್ನಡವನ್ನು ಗೌರವಿಸಬೇಕಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…
ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…
ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…
ಕೆ.ಬಿ.ರಮೇಶನಾಯಕ ಹೋಬಳಿಗೊಂದರಂತೆ ೨೯ ಮೇವು ಬ್ಯಾಂಕ್ ತೆರೆಯಲು ಪ್ರಸ್ತಾವನೆ ಮೈಸೂರು: ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿದ್ದರಿಂದಾಗಿ ಮಳೆಯಾಶ್ರಿತ…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…
ಮಂಜು ಕೋಟೆ ಗುರುವಾರ ಚುನಾವಣೆ: ಅಧಿಕಾರ ಹಿಡಿಯಲು ಪಕ್ಷಗಳ ಪೈಪೋಟಿ; ಜನರಲ್ಲಿ ಕುತೂಹಲ ಹೆಚ್.ಡಿ.ಕೋಟೆ: ಬಿಜೆಪಿ-ಜಾ.ದಳ ಮೈತ್ರಿ ಮತ್ತು ಕಾಂಗ್ರೆಸ್…