Mysore
25
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ ಚಲಿಸುವ ವಾಹನಗಳ ವೇಗವನ್ನು ನಿಯಂತ್ರಿಸಲು ರಸ್ತೆ ಡುಬ್ಬಗಳನ್ನೂ ನಿರ್ಮಿಸಲಾಗಿದೆ. ರಾತ್ರಿಯ ವೇಳೆ ವಾಹನ ಸವಾರರರಿಗೆ ರಸ್ತೆ ಡುಬ್ಬ ಕಾಣದೇ ವೇಗವಾಗಿ ಚಲಿಸಿದರೆ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿರುತ್ತವೆ. ಹಾಗಾಗಿ ರಸ್ತೆ ಡುಬ್ಬಗಳಿಗೆ ಬಿಳಿಯ ಬಣ್ಣವನ್ನು ಬಳಿದರೆ ವಾಹನ ಸವಾರರಿಗೆ ಕಾಣುವುದರಿಂದ ಸುಗಮ ಸಂಚಾರಕ್ಕೂ ಅನುಕೂಲವಾಗುತ್ತದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.

 

Tags:
error: Content is protected !!