ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದಲ್ಲಿ ಆಪ್ ಆಧಾರಿತ ಕ್ಯಾಬ್ ಚಾಲಕರು ಇಂಧನ ಬೆಲೆ ಹೆಚ್ಚಳ ನೆಪವೊಡ್ಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದಾರೆ. ಕ್ಯಾಬ್ ಬುಕ್ ಮಾಡಿದರೆ ಪ್ರಯಾಣಿಕರಿಗೆ ಕರೆ ಮಾಡುವ ಚಾಲಕರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ. ಸಮೀಪವೇ ಇದ್ದರೆ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇಲ್ಲದಿದ್ದರೆ ಕನಿಷ್ಠ ೧೦೦ ರೂ. ನೀಡಬೇಕು ಎಂದು ತಾಕೀತು ಮಾಡುತ್ತಾರೆ. ಆಪ್‌ನಲ್ಲಿ ೭೦ ರೂ. ತೋರಿಸುತ್ತಿದ್ದರೂ ೧೦೦ ರೂ. ಕೊಡಿ ಎನ್ನುತ್ತಾರೆ. ಈ ಬಗ್ಗೆ ಸಂಬಂಧಪಟ್ಟ ಕಂಪೆನಿಗಳನ್ನು ಕೇಳಿ ಎಂದರೆ ನಾವೇಕೆ ಕೇಳಬೇಕು ಎನ್ನುತ್ತಾರೆ. ಪ್ರಯಾಣದ ದರ ೧೦೦ ರೂ. ಮೀರಿದರೆ ಇನ್ನೂ ಹೆಚ್ಚು ಹಣವನ್ನು ಕೊಡಬೇಕು ಎಂದು ವಿತಂಡವಾದ ಮಾಡುತ್ತಾರೆ. ಸಂಬಂಧಪಟ್ಟವರು ಈಗಲಾದರೂ ಪ್ರಯಾಣಿಕರ ಸುಲಿಗೆ ಮಾಡುತ್ತಿರುವ ಆಪ್ ಆಧಾರಿತ ಕ್ಯಾಬ್ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪ್ರಯಾಣಿಕರ ಹಿತವನ್ನು ಕಾಪಾಡಬೇಕಾಗಿದೆ.
– ಮಹತಿ, ಮೈಸೂರು
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…