ಓದುಗರ ಪತ್ರ
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್‌ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್‌ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್ ಹಾಕದೇ ಇರುವುದರಿಂದ ಮಳೆಗಾಲದಲ್ಲಿ ಕೆಲಸರು ಹಾಗೂ ಬೇಸಿಗೆಯಲ್ಲಿ ದೂಳಿನಿಂದ ಸಾರ್ವಜನಿಕರು ಪರಿತಪಿಸುವಂತಾಗಿದೆ.
ರಾಮಕೃಷ್ಣನಗರ ಜಿ ಬ್ಲಾಕ್‌ನಲ್ಲಿ ಇರುವ ಗಣಪತಿ ದೇವಸ್ಥಾನದಿಂದ ಹಿಡಿದು ಕುವೆಂಪುನಗರ ಪೊಲೀಸ್ ಠಾಣೆಯವರೆಗೂ ರಸ್ತೆಯು ಹಳ್ಳಗಳಿಂದ ಕೂಡಿದೆ, ಇಂತಹ ರಸ್ತೆಯಲ್ಲಿ ಒಂದು ಬಸ್ಸು ಬಂದರೆ ಸಾಕು ರಸ್ತೆಯೇ ಕಾಣಿಸದಷ್ಟು ದೂಳು ಆವರಿಸುತ್ತದೆ.
ದ್ವಿಚಕ್ರ ವಾಹನಗಳು ಸವಾರರಂತೂ ಒಂದು ಕೈಯಲ್ಲಿ ಮೂಗನ್ನು ಮುಚ್ಚಿಕೊಂಡು, ಮತ್ತೊಂದು ಕೈಯಲ್ಲಿ ವಾಹನ ಚಲಾಯಿಸುತ್ತಾರೆ. ದೂಳಿನಿಂದಾಗಿ ಸಾರ್ವಜನಿಕರಿಗೆ ಉಸಿರಾಟದ ಸಮಸ್ಯೆ ಕಾಡುತ್ತಿದ್ದು, ರಸ್ತೆಯಲ್ಲಿ ಓಡಾಡುವ ಪದಚಾರಿಗಳು ಮಾಸ್ಕನ್ನು ಕಡ್ಡಾಯವಾಗಿ ಬಳಸುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟವರು ರಸ್ತೆಗೆ ಡಾಂಬರು ಹಾಕಿಸುವ ಮೂಲಕ ಸಾರ್ವಜನಿಕರ ಹಿತ ಕಾಪಾಡಬೇಕಾಗಿದೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…