ಓದುಗರ ಪತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ತಳುಕು ಹಾಕಿಕೊಂಡಿರುವ ಮುಡಾ ಹಗರಣ ಭಾರೀ ಸಂಚಲನ ಸೃಷ್ಟಿಸಿದ್ದು, ಊಹಿಸಲಾರದಷ್ಟರ ಮಟ್ಟಿಗೆ ಹಗರಣ ನಡೆದಿದೆ ಎನ್ನಲಾಗಿದೆ.
ಈ ಸಂಬಂಧ ಇ.ಡಿ. ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿ ನಡೆದಿರುವ ಹಗರಣವನ್ನು ನೋಡಿದರೆ ಪ್ರಭಾವಿಗಳೆಲ್ಲ ಒಟ್ಟಿಗೆ ಸೇರಿ ಮಾಡಿರುವುದು ತಿಳಿಯುತ್ತದೆ. ಬಡವರ್ಗದ ಜನರಿಗೆ ಸೇರಬೇಕಾದ ಕೋಟ್ಯಂತರ ರೂ. ಮೌಲ್ಯದ ನಿವೇಶನಗಳು ಭ್ರಷ್ಟ ರಾಜಕಾರಣಿಗಳ ಪಾಲಾಗಿರುವುದು ವಿಪರ್ಯಾಸ. ದಾಳಿ ವೇಳೆ ಮುಡಾ ಅಧಿಕಾರಿಗಳು ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಲು ತಡಬಡಾಯಿಸಿರುವುದಾಗಿಯೂ ವರದಿಯಾಗಿದೆ.
ಈ ಹಗರಣದಲ್ಲಿ ಪ್ರಭಾವಿಗಳು ಭಾಗಿಯಾಗಿರುವುದರಿಂದ ಇದರ ತನಿಖೆಯ ಸತ್ಯಾಸತ್ಯತೆಗಳು ಜನರಿಗೂ ಗೊತ್ತಾಗಬೇಕು. ಆದ್ದರಿಂದ ತನಿಖಾ ಅಧಿಕಾರಿಗಳು ತಮ್ಮ ತನಿಖೆಯ ಅಂಶಗಳನ್ನು ಹಾಗೂ ಹಗರಣದಲ್ಲಿ ಸಿಲುಕಿಕೊಂಡಿರುವವರು ನೀಡುವ ಉತ್ತರಗಳನ್ನು ಯಥಾವತ್ತಾಗಿ ಮಾಧ್ಯಮಗಳ ಮೂಲಕ ಜನರಿಗೆ ಮುಟ್ಟಿಸಬೇಕು. ಮುಡಾ ಸ್ವಾಧೀನಕ್ಕೆ ಎಷ್ಟು ನಿವೇಶನಗಳು ಬರಬೇಕು, ಈವರೆಗೂ ಎಷ್ಟು ಅಕ್ರಮ ನಡೆದಿದೆ ಎಂಬುದರ ಮಾಹಿತಿಯನ್ನು ಅಧಿಕಾರಿಗಳು ಜನರ ಮುಂದೆ ತೆರೆದಿಡುವ ಜತೆಗೆ ಭ್ರಷ್ಟರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…