Andolana originals

ಓದುಗರ ಪತ್ರ; ಸಫಾರಿಗೆ ಅನುಮತಿ ಖಂಡನೀಯ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ ಕಾರಣವಾಗಿದೆ. ಆದರೆ ಕೆಲ ದಿನಗಳ ಹಿಂದೆ ಹುಲಿ ದಾಳಿಯಿಂದ ಮೂವರು ಮೃತಪಟ್ಟು,ಮತ್ತೊಬ್ಬರು ಎರಡು ಕಣ್ಣುಗಳನ್ನೂ ಕಳೆದುಕೊಂಡಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ತಾಲ್ಲೂಕಿನ ಗ್ರಾಮೀಣ ಭಾಗದ ರೈತರ ಸಾಕು ಪ್ರಾಣಿಗಳ ಜೀವಹಾನಿಯೂ ಆಗಿದೆ. ಕಬಿನಿ ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಕ್ರಮ ರೆಸಾರ್ಟ್‌ಗಳಲ್ಲಿ ನಡೆಯುವ ಪ್ರವಾಸಿಗರ ಮಿತಿ ಮೀರಿದ ಚಟುವಟಿಕೆಗಳಿಂದ ಕಾಡು ಪ್ರಾಣಿಗಳು, ಹುಲಿಗಳು,ಆನೆಗಳು ನಾಡಿನತ್ತ ಮುಖ ಮಾಡಿ ಪ್ರಾಣ ಹಾನಿ,ಬೆಳೆ ಹಾನಿ ಉಂಟು ಮಾಡುತ್ತಿವೆ. ಅಕ್ರಮ ರೆಸಾರ್ಟ್‌ಗಳ ವಿರುದ್ಧ ರೈತರು ಮತ್ತು ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ೨-೩ತಿಂಗಳುಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿಯನ್ನು ಸ್ಥಗಿತಗೊಳಿಸಿತ್ತು. ಆದರೆ ಪಟ್ಟಭದ್ರರ ಹಿತಾಸಕ್ತಿ,ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಇದೀಗ ಮತ್ತೆ ಸಫಾರಿ ಆರಂಭಕ್ಕೆ ಅನುಮತಿ ನೀಡಿದೆ. ರೈತ ಸಂಘಟನೆಗಳು, ಇತರ ಜನಪರಸಂಘಟನೆಗಳು, ಸ್ಥಳೀಯರು, ಪರಿಸರವಾದಿಗಳು, ಸೇವ್ ಕಬಿನಿ ತಂಡದ ಪದಾಧಿಕಾರಿಗಳ ಹೋರಾಟ, ವಿರೋಧದ ನಡುವೆಯೂ ಸಫಾರಿ ಆರಂಭಕ್ಕೆ ಅನುಮತಿಸಿರುವುದು ಖಂಡನೀಯ. ರೆಸಾರ್ಟ್‌ಗಳಿಂದ ಉಂಟಾಗುವ ಜನಜಂಗುಳಿ, ಮಾನವ ಚಟುವಟಿಕೆಗಳಿಂದ ವನ್ಯ ಪ್ರಾಣಿಗಳ ನೆಮ್ಮದಿಗೆ ಭಂಗ ಉಂಟು ಮಾಡಲು ಪ್ರೇರೇಪಣೆ ನೀಡಿರುವುದು ಸರ್ಕಾರದ ಬೇಜವಾಬ್ದಾರಿತನದ ಪರಮಾವಧಿಯಾಗಿದೆ. ಮತ್ತೆ ರೈತರ ಮೇಲೆ ವನ್ಯ ಪ್ರಾಣಿಗಳ ದಾಳಿ ನಡೆದರೆ ಇದಕ್ಕೆ ಸರ್ಕಾರ ದೊಡ್ಡ ಬೆಲೆ ತೆರಬೇಕಾಗುತ್ತದೆ.

– ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ. ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

42 mins ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

47 mins ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

1 hour ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

1 hour ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

6 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

6 hours ago