ಚಿನ್ನದ ಪದಕ ಗೆಲ್ಲುವ ಗುರಿಯಿತ್ತು, ಶ್ರಮವೂ ಇತ್ತು, ಕೋಟ್ಯಂತರ ಭಾರತೀಯರ ಭರವಸೆಯೂ ಆಕೆಯ ಮೇಲಿತ್ತು. ಇನ್ನೇನು ಗೆಲ್ಲಲು ಒಂದೇ ಮೆಟ್ಟಿಲು ಬಾಕಿ ಇದೆ ಎನ್ನುವಷ್ಟರಲ್ಲೇ ಭಾರತೀಯರಿಗೆ ಆಘಾತ ಎದುರಾಯಿತು.
2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಭರವಸೆಯೊಂದಿಗೆ 50 ಕೆ.ಜಿ. ಕುಸ್ತಿ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಅನ್ನು ಮಣಿಸಿ ಫೈನಲ್ ತಲುಪಿದ್ದ ವಿನೇಶ್ ಫೋಗಟ್ ಫೈನಲ್‌ಗೂ ಮುನ್ನ ನಡೆದ ತೂಕದ ಪರೀಕ್ಷೆಯಲ್ಲಿ 50 ಕೆ.ಜಿ.ಗಿಂತ 100 ಗ್ರಾಂ ಹೆಚ್ಚಾಗಿದೆ ಎಂಬ ಕಾರಣದಿಂದಾಗಿ ಒಲಿಂಪಿಕ್ಸ್ ನಿಯಮಾವಳಿಗಳ ಪ್ರಕಾರ ಅನರ್ಹಗೊಂಡಿದ್ದಾರೆ. ಇದು ಕೋಟ್ಯಂತರ ಭಾರತೀಯರಿಗೆ ದೊಡ್ಡ ಆಘಾತ ನೀಡಿದೆ.
ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದ ವಿನೇಶ್ ಫೋಗಟ್ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದೇ ಒಂದು ದೊಡ್ಡ ಸವಾಲು. ಇದರ ನಡುವೆ ಆಕೆ ಫೈನಲ್ ತಲುಪಿ, ಕುಸ್ತಿಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಫೈನಲ್‌ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನ ಗೆದ್ದು ಬರುತ್ತಾರೆ ಎಂಬುದು ಭಾರತೀಯರ ಭರವಸೆಯಾಗಿತ್ತು.
ಆಕೆಯ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲು ಕೇವಲ 100 ಗ್ರಾಂ ತೂಕದ ಅಂತರ ಮುಳ್ಳಾಗಿದೆ. ಆಕೆಗೆ ಚಿನ್ನ ಗೆಲ್ಲುವ ಅವಕಾಶ ಕೈತಪ್ಪಿರಬಹುದು. ಆದರೆ, ಸೆಮಿಫೈನಲ್‌ನಲ್ಲಿ ವಿಶ್ವ ಚಾಂಪಿಯನ್ ಯುಯಿ ಸುಸಾಕಿಯನ್ನು ಮಣಿಸಿಫೈನಲ್ ತಲುಪುವ ಮೂಲಕವಿನೇಶ್ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದಾರೆ.
-ಎನ್.ಆರ್.ಚೇತನ್, ಮೈಸೂರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…