Andolana originals

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ ಕಡಿದ ಎಲ್ಲ ೪೦ ಮರಗಳಿಗೆ ಬದಲಾಗಿ, ಈಗ ಗಿಡಗಳನ್ನು ನೆಟ್ಟರೆ ೫ ವರ್ಷದೊಳಗೆ ೧೨ ಅಡಿ ಬೆಳೆಯುತ್ತವೆ ಎಂದು ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಪರಿಸರ ಪ್ರೇಮಿಗಳಿಗೆ ಭರವಸೆ ನೀಡಿದ್ದುದು ಸರಿಯಷ್ಟೇ. ಆದರೆ ಇದುವರೆಗೂ ಒಂದೂ ಗಿಡವನ್ನು ನೆಡದೆ ಇರುವುದು ಸೋಜಿಗವೇ ಸರಿ. ಇದನ್ನು ಗಮನಿಸಿದ ಹಸಿರು ಪ್ರೇಮಿಗಳಾದ ರಘುಲಾಲ್ ಅಂಡ್ ಕಂಪೆನಿಯವರು ರಸ್ತೆಗಳ ಇಕ್ಕೆಲಗಳಲ್ಲಿ ಗಿಡಗಳನ್ನು ನೆಟ್ಟು, ರಕ್ಷಣೆ ಮಾಡಿ, ನೀರು ಹಾಕಿ ಎರಡು ತಿಂಗಳುಗಳಿಂದ ಪೋಷಿಸುತ್ತಿದ್ದ ಗಿಡಗಳನ್ನು ಪುಟ್‌ಪಾತ್ ನಿರ್ಮಾಣ ಮಾಡಲು ಪಾಲಿಕೆಯವರು ಕಿತ್ತೆಸೆದಿರುವುದು ವಿಪರ್ಯಾಸವೇ ಸರಿ.

ಹೈದರಾಲಿ ರಸ್ತೆ ಈಗ ಜೋಡಿರಸ್ತೆಯಾಗಿ ಕಂಗೊಳಿಸುತ್ತಿದ್ದು, ನಗರ ಪಾಲಿಕೆ ಅಧಿಕಾರಿಗಳು ಪರಿಸರ ಪ್ರೇಮಿಗಳಿಗೆ ಗಿಡಗಳನ್ನು ನೆಡುವ ಭರವಸೆಯನ್ನು ನೀಡಿದ್ದುದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಅದರಂತೆ ಈಗ ಗಿಡಗಳನ್ನು ನೆಟ್ಟು ಪಾಲಿಕೆ ನಂಬಿಕೆಯನ್ನು ಉಳಿಸಿಕೊಳ್ಳುವುದು ಒಳಿತು.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

2 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

2 hours ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

2 hours ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

2 hours ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

2 hours ago

ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

ಮಂಜು ಕೋಟೆ ಇಂದು ಕೋಟೆಯಲ್ಲಿ ಸಮಾವೇಶ; ಬೃಹತ್ ವೇದಿಕೆ ನಿರ್ಮಾಣ; ಸಾವಿರಾರು ಜನರು ಸೇರುವ ನಿರೀಕ್ಷೆ; ಶಕ್ತಿ ಪ್ರದರ್ಶನಕ್ಕೆ ಮುಂದಾದ…

2 hours ago