Andolana originals

ಓದುಗರ ಪತ್ರ: ಗಿಡ ನೆಟ್ಟರಷ್ಟೆ ಸಾಲದು ಪೋಷಣೆ ಮಾಡಬೇಕು

ಪ್ರತಿ ವರ್ಷ ಜೂನ್ ೫ರಂದು ವಿಶ್ವ ಪರಿಸರ ದಿನಾಚರಣೆ ನಿಮಿತ್ತ ರಾಜ್ಯದ ಹಲವು ಶಾಲಾ- ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳು ಸೇರಿದಂತೆ ವಿವಿಧೆಡೆ ಸಸಿಗಳನ್ನು ನೆಟ್ಟು ನೀರೆರೆಯುತ್ತಾರೆ. ಪರಿಸರ ದಿನದಂದು ಸಸಿಗಳನ್ನು ನೆಟ್ಟು ಅವುಗಳ ಜೊತೆ ಫೋಟೋ, ಸೆಲ್ಛಿ ತೆಗೆಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವುಗಳನ್ನು ಹರಿಯ ಬಿಡುವುದು ಸರಿಯಷ್ಟೆ. ಆದರೆ ಕೇವಲ ಸೆಲ್ಛಿ ಹಾಗೂ ಫೋಟೋಗೋಸ್ಕರ ಸಸಿಗಳನ್ನು ನೆಡುವ, ಪ್ರಚಾರ ಪಡೆಯುವ ಗೀಳು ಹಲವರಲ್ಲಿದೆ. ಕೆಲವರು ಗಿಡ ನೆಟ್ಟು ಮಾರನೆಯ ದಿನವೇ ಅದನ್ನು ಮರೆತು ಬಿಡುತ್ತಾರೆ. ಗಿಡ ನೆಡುವುದು ಕೇವಲ ಪರಿಸರ ದಿನಾಚರಣೆಗಷ್ಟೇ ಸೀಮಿತವಾಗದೆ,ನೆಟ್ಟ ಗಿಡಕ್ಕೆ ಒಂದಷ್ಟು ತಿಂಗಳುಗಳು ನೀರೆರೆದು ಕಾಪಾಡುವ ಜವಾಬ್ದಾರಿಯನ್ನು ನಿರಂತರವಾಗಿ ಮಾಡಿದರೆ ಪರಿಸರ ದಿನದಂದು ಗಿಡ ನೆಡುವುದಕ್ಕೆ ಅರ್ಥವಿರುತ್ತದೆ. ಗಿಡ ನೆಡುವ ಸಂಭ್ರಮದಲ್ಲಿ ಇದ್ದ ಹುಮ್ಮಸ್ಸನ್ನು ಗಿಡಗಳ ಬೆಳವಣಿಗೆಯಲ್ಲೂ ತೋರಿದರೆ ಪರಿಸರ ದಿನಾಚರಣೆ ಸಾರ್ಥಕವಾಗುತ್ತದೆ.

ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

4 mins ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

3 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

4 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

4 hours ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ…

4 hours ago

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago