Mysore
20
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಓದುಗರ ಪತ್ರ| ಕುಡಿಯುವ ನೀರಿನ ಘಟಕ ದುರಸ್ತಿಪಡಿಸಿ

ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಸಮೀಪದ ಅರೇನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವು ಸೂಕ್ತ ನಿರ್ವಹಣೆ ಇಲ್ಲದೆ ಆಗಾಗ್ಗೆ ಕೆಟ್ಟು ಹೋಗುತ್ತಿದೆ.

ಈ ನೀರಿನ ಘಟಕವು ದೊಡ್ಡಬೇಲಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು, ಈ ಪಂಚಾಯಿತಿಯ ಸಿಬ್ಬಂದಿ ಈ ಶುದ್ಧ ನೀರಿನ ಘಟಕವನ್ನು ನಿರ್ವಹಣೆ ಮಾಡುವಲ್ಲಿ ಬೇಜವಾಬ್ದಾರಿಯನ್ನು ತೋರುತ್ತಿದ್ದಾರೆ. ಇದರಿಂದಾಗಿ ಈ ಘಟಕವು ಪದೇ ಪದೇ ಕೆಟ್ಟು ಹೋಗುತ್ತಿದ್ದು, ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಈ ಬಗ್ಗೆ ಇಲ್ಲಿನ ನೀರುಗಂಟಿಯನ್ನು ಪ್ರಶ್ನಿಸಿದರೆ ‘ನಮ್ಮ ಮೇಲಿನವರ ಗಮನಕ್ಕೆ ತನ್ನಿ’ ಎನ್ನುತ್ತಾರೆ. ಅಲ್ಲದೆ ಈ
ನೀರಿನ ಘಟಕಕ್ಕೆ ಸರಿಯಾದ ಭದ್ರತೆ ಇಲ್ಲದೆ ಇಲ್ಲಿನ ಹಣದ ಪೆಟ್ಟಿಗೆಯು ಆಗಾಗ್ಗೆ ಕಳ್ಳತನವಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಗ್ರಾಮ ಪಂಚಾ ಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕಿದೆ.

-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.

Tags:
error: Content is protected !!