ಮೈಸೂರಿನ ರಾಮಾನುಜ ರಸ್ತೆಯ ೧೭ನೇ ಕ್ರಾಸ್‌ನ ರಸ್ತೆಯಲ್ಲಿ ಕಸದ ರಾಶಿಯೇ ಬಿದ್ದಿದೆ. ಇದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಮಳೆಗಾಲವಾಗಿರುವುದರಿಂದ ಕಸ ಕೊಳೆತು ದುರ್ನಾತ ಬೀರುತ್ತಿದೆ. ರಸ್ತೆಯಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.
ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೂಡಲೇ ಕಸವನ್ನು ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಹಾಗೂ ಎಲ್ಲೆಂದರಲ್ಲಿ ಕಸ ಬಿಸಾಡದೆ ಮಹಾನಗರ ಪಾಲಿಕೆಯ ಕಸ ಸಂಗ್ರಹಣೆ ವಾಹನಕ್ಕೆ ಕಸ ಹಾಕುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾಗಿದೆ.
– ಮಹದೇವಸ್ವಾಮಿ, ರಾಮಾನುಜ ರಸ್ತೆ, ಮೈಸೂರು





