Andolana originals

ಓದುಗರ ಪತ್ರ: ರಾಮಾನುಜ ರಸ್ತೆಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ರಾಮಾನುಜ ರಸ್ತೆಯ ೧೭ನೇ ಕ್ರಾಸ್‌ನ ರಸ್ತೆಯಲ್ಲಿ ಕಸದ ರಾಶಿಯೇ ಬಿದ್ದಿದೆ. ಇದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಮಳೆಗಾಲವಾಗಿರುವುದರಿಂದ ಕಸ ಕೊಳೆತು ದುರ್ನಾತ ಬೀರುತ್ತಿದೆ. ರಸ್ತೆಯಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡು  ಓಡಾಡುವಂತಾಗಿದೆ.

ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೂಡಲೇ ಕಸವನ್ನು ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಹಾಗೂ ಎಲ್ಲೆಂದರಲ್ಲಿ ಕಸ ಬಿಸಾಡದೆ ಮಹಾನಗರ ಪಾಲಿಕೆಯ ಕಸ ಸಂಗ್ರಹಣೆ ವಾಹನಕ್ಕೆ ಕಸ ಹಾಕುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾಗಿದೆ.

– ಮಹದೇವಸ್ವಾಮಿ, ರಾಮಾನುಜ ರಸ್ತೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

9 mins ago

ಪ್ರವಾಸಿಗರ ಆಕರ್ಷಣೆಯ ಭದ್ರದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

41 mins ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

53 mins ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

5 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

5 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

5 hours ago