ರಾಜ್ಯದ ಕಾವೇರಿ, ಕಪಿಲ, ತುಂಗಭದ್ರಾ, ಕೃಷ್ಣೆ, ಗೋದಾವರಿ ನದಿಗಳ ಪಕ್ಕದಲ್ಲೇ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರು ಈ ನದಿಗಳಲ್ಲಿ ಸ್ನಾನ ಮಾಡಿ ಅಥವಾ ಕೈ-ಕಾಲುಗಳನ್ನು ಸ್ವಚ್ಛಗೊಳಿಸಿಕೊಂಡು ದೇವಾಲಯಗಳಿಗೆ ಹೋಗುವ ಪದ್ಧತಿ ಇದೆ. ಇನ್ನು ಕೆಲವರು ದಂಡೆಯ ಮೇಲೆ ನದಿಗೆ ಪೂಜೆ ಸಲ್ಲಿಸುತ್ತಾರೆ. ಈ ವೇಳೆ ಪೂಜೆ ಸಾಮಗ್ರಿಗಳನ್ನು ತರುವ ಪ್ಲಾಸ್ಟಿಕ್ ಕವರ್, ಗಂಧದಗಡ್ಡಿ, ಕರ್ಪೂರ, ಅರಿಶಿನ, ಕುಂಕುಮ ಸೇರಿದಂತೆ ಅನೇಕ ತ್ಯಾಜ್ಯಗಳನ್ನು ನದಿಗೆ ಬೀಸಾಡುತ್ತಿದ್ದು, ನದಿಗಳು ಕಲುಷಿತವಾಗುತ್ತಿವೆ.
ಇದು ಒಂದೆಡೆಯಾದರೆ, ಮತ್ತೊಂದೆಡೆ, ನದಿಯ ದಂಡೆಯ ಮೇಲೆಯೇ ಮಲ ಮೂತ್ರ ವಿಸರ್ಜನೆ ಮಾಡುತ್ತಿದ್ದು, ನದಿಯ ಅಂಚಿನಲ್ಲಿ ಮದ್ಯದ ಕೂಟಗಳನ್ನು ಮಾಡಿ ಬಾಟಲಿ, ಪ್ಲಾಸ್ಟಿಕ್ ಕವರ್‌ಗಳನ್ನು ಅಲ್ಲಿಯೇ ಬೀಸಾಡಿ ಹೋಗುತ್ತಿದ್ದಾರೆ. ಇದೂ ಕೂಡ ನದಿಗಳು ಕಲುಷಿತಗೊಳ್ಳಲು ಕಾರಣವಾಗಿದೆ. ಇಂತಹ ಕಲುಷಿತ ನದಿಗಳಲ್ಲಿ ದೇವಾಲಯಕ್ಕೆ ಬರುವ ಭಕ್ತರು ಸ್ನಾನ ಮಾಡುವುದರಿಂದ ಅವರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ಅಲ್ಲದೆ ಜಲಚರಗಳಿಗೂ ಹಾನಿಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ತೀರ್ಥಕ್ಷೇತ್ರಗಳ ಸ್ಥಳಗಳಲ್ಲಿ ಹಾಗೂ ನದಿಗಳ ಅಂಚಿನಲ್ಲಿ ಸ್ವಚ್ಛತೆ ಕಾಪಾಡಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…
ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…
ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…
2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…
ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…