Andolana originals

ಓದುಗರ ಪತ್ರ: ಜನರ ಹಿತ ಮರೆತ ರಾಜಕೀಯ ಪಕ್ಷಗಳು

ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದೆ. ಭಾರತೀಯ ಸೇನಾಪಡೆಯನ್ನು ಬೆಂಬಲಿಸುವ ಉದ್ದೇಶದಿಂದ ರಾಜ್ಯದಲ್ಲಿ ಕಾಂಗ್ರೆಸ್ ತಿರಂಗಾ ಯಾತ್ರೆ ನಡೆಸಿತು. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ಕೂಡ ಈಗ ತಿರಂಗಾಯಾತ್ರೆ ಕೈಗೊಂಡಿದೆ. ಈಗ ಕಾಂಗ್ರೆಸ್ ಜೈ ಹಿಂದ್ ಯಾತ್ರೆ ಕೈಗೊಳ್ಳಲು ಮುಂದಾಗಿದೆ. ಅಮೆರಿಕ ಮಧ್ಯಪ್ರವೇಶ ಹಾಗೂ ರಾಷ್ಟ್ರೀಯ ಭದ್ರತಾ ನಿರ್ವಹಣೆ ಕುರಿತಂತೆ ಕೇಂದ್ರ ಸರ್ಕಾರ ಮೌನವಾಗಿದೆ ಎಂದು ಆರೋಪಿ ಕಾಂಗ್ರೆಸ್ ಈ ಯಾತ್ರೆಗೆ ತಯಾರಿ ನಡೆಸಿದೆ.

ರಾಜ್ಯದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಸ್ವಹಿತಾಸಕ್ತಿಯಿಂದ ಯಾತ್ರೆಗಳ ಪೈಪೋಟಿಗೆ ಇಳಿದಿರುವುದು ಆರೋಗ್ಯಕರ ಬೆಳವಣಿಗೆಯಲ್ಲ.  ಜನರ ಹಿತದೃಷ್ಟಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಬೇಕಾದ ಆಡಳಿತ ಪಕ್ಷ, ಅಧಿಕಾರ ಭದ್ರತೆಗೆ ಆದ್ಯತೆ ನೀಡುತ್ತಿರುವುದು ವಿಪರ್ಯಾಸ.

ವಿಪಕ್ಷ ಕೂಡ ಸರ್ಕಾರದ ಲೋಪಗಳನ್ನು ಸಮರ್ಥವಾಗಿ ಜನರ ಮುಂದೆ  ಇಡುವುದರಲ್ಲಿ ವಿಫಲವಾಗಿದೆ. ಮುಂದೆ ರಾಜ್ಯದಲ್ಲಿ ಅಧಿಕಾರಕ್ಕೇರುವ ಆಸೆಯಿಂದ ಹಾಗೂ ಪಕ್ಷದ ಹೈಕಮಾಂಡ್ ಕೃಪಾಕಟಾಕ್ಷಕ್ಕೆ ಪಾತ್ರವಾಗುವ ಅದಮ್ಯ ಬಯಕೆಯಿಂದ ಪ್ರತಿಭಟನೆ, ಯಾತ್ರೆಯನ್ನು ಮಾಡುತ್ತಿದೆ ಅನಿಸುತ್ತಿದೆ. ಇದೊಂದು ರೀತಿಯಲ್ಲಿ ‘ಅಪ್ಪ-ಅಮ್ಮ’ನ ಜಗಳದಲ್ಲಿ ಕೂಸು ಬಡವಾಯಿತು ಎಂಬಂತಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸ್ವಹಿತಾಸಕ್ತಿಯಿಂದ ರಾಜ್ಯದ ಜನರು ಹತಾಶರಾಗಿದ್ದಾರೆ.

-ಆರ್.ವಿ.ಶಿವಾನಂದ, ಕನಕದಾಸನಗರ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

3 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

3 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

3 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

3 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

3 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

4 hours ago