ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಟಿಕೆಟ್‌ಗೆ ಲೋಕಸಭಾ ಮಾಜಿ ಸದಸ್ಯ ಮತ್ತು ಮಾಜಿ ಶಾಸಕರ ಜಗಳ ಮಾಧ್ಯಮಗಳ ಮೂಲಕ ಬೀದಿಗೆ ಬಂದಿದೆ. ಇದು ಇಬ್ಬರಿಗೂ ಗೌರವ ತರುವ ವಿಷಯವಲ್ಲ. ಕಳೆದ ೨೦ ವರ್ಷಗಳ ಕಾಲ ಬಿಜೆಪಿ ವಶದಲ್ಲಿದ್ದ ಈ ಕ್ಷೇತ್ರವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಾಗಿದೆ. ಈ ಕ್ಷೇತ್ರ ಬಿಜೆಪಿಗೆ ಆಶಾದಾಯಕವಾಗಿದೆ ಎಂದು ಭಾವಿಸಿ ಇಬ್ಬರೂ ಮಾಜಿ ಅನುಭವಿ ರಾಜಕಾರಣಿಗಳು ಈಗಲೇ ಈ ಕ್ಷೇತ್ರದ ಟಿಕೆಟ್ ಆಕಾಕ್ಷಿಗಳಾಗಿರುವುದು ಸರಿಯಷ್ಟೆ. ಕ್ಷೇತ್ರದಿಂದ ಸ್ಪರ್ಧಿಸುವವರನ್ನು ಪಕ್ಷದ ವರಿಷ್ಠರೇ ಆಯ್ಕೆ ಮಾಡುತ್ತಾರೆ. ತಮಗೆ ಟಿಕೆಟ್ ನೀಡಬೇಕು ಎಂದು ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಬೇಕೇ ಹೊರತು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಅವರ ಘನತೆಗೆ ತಕ್ಕುದಲ್ಲ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…
ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…
ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…
ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…
ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…