ಓದುಗರ ಪತ್ರ
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ ಯೋಜನೆಗಳಲ್ಲಿ ತೊಡಗಿಸಿರುವ ಹಣವನ್ನು ಅವಧಿ ಪೂರ್ಣವಾದ ನಂತರ ಹಿಂಪಡೆಯುವ ಯಾವುದೇ ರೀತಿಯ ಚಲನ್‌ಗಳು ಕನ್ನಡದಲ್ಲಿ ದೊರೆಯುವುದಿಲ್ಲ.
ಇದರಿಂದ ಇಂಗ್ಲಿಷ್ ಬಾರದವರು ಚಲನ್ ತುಂಬಲು ಅನ್ಯರನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ. ಚಲನ್‌ನ ಒಂದು ಭಾಗದಲ್ಲಿ ಇಂಗ್ಲಿಷ್ ಹಾಗೂ ಮತ್ತೊಂದು ಭಾಗದಲ್ಲಿ ಹಿಂದಿಯಲ್ಲಿ ಮಾತ್ರ ಮುದ್ರಿತವಾಗಿರುತ್ತವೆ. ನೆರೆಯ ರಾಜ್ಯ ತಮಿಳುನಾಡಿನಲ್ಲಿ ಒಂದು ಭಾಗದಲ್ಲಿ ಇಂಗ್ಲಿಷ್ ಹಾಗೂ ಇನ್ನೊಂದು ಕಡೆ ತಮಿಳು ಭಾಷೆಯಲ್ಲಿ ಚಲನ್ ಮುದ್ರಣವಾಗಿರುತ್ತದೆ. ಆದರೆ ನಮ್ಮ ಕರ್ನಾಟಕದ ಅಂಚೆ ಕಚೇರಿಗಳಲ್ಲಿ ಕನ್ನಡದಲ್ಲಿ ಚಲನ್ ಮುದ್ರಣವಾಗದಿರುವ ಬಗ್ಗೆ ಸ್ಥಳೀಯ ಅಂಚೆ ಕಚೇರಿಗಳ ಸಿಬ್ಬಂದಿಯನ್ನು ಕೇಳಿದರೆ ನೀವು ನಮ್ಮ ಮೇಲಧಿಕಾರಿಗಳಿಗೆ ದೂರು ನೀಡಿ ಎನ್ನುತ್ತಾರೆ. ಮೇಲಧಿಕಾರಿಗಳಿಗೆ ಕೇಳಿದರೆ ಅವರು, ನೀವು ದೆಹಲಿಯಲ್ಲಿರುವ ಪ್ರಧಾನ ಕಚೇರಿಯನ್ನು ಕೇಳಿ ಎನ್ನುತ್ತಾರೆ. ರಾಜ್ಯದ ಎಲ್ಲ ಅಂಚೆ ಕಚೇರಿಗಳಲ್ಲೂ ಕನ್ನಡದಲ್ಲೂ ಚಲನ್ ಮುದ್ರಣವಾಗುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ಗಮನ ಹರಿಸಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…