ಓದುಗರ ಪತ್ರ
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ ಮಳಿಗೆಗಳಿಗೆ ಕನ್ನಡ ಫಲಕಗಳನ್ನು ಹಾಕಿರುವುದು ಶ್ಲಾಘನೀಯ.
ಆದರೆ ಇಲ್ಲಿ ಕೆಲಸ ಮಾಡುವವರು ಮಾತ್ರ ಕನ್ನಡಿಗರಲ್ಲ ಎಂಬುದು ವಿಪರ್ಯಾಸದ ಸಂಗತಿ. ಹೊರ ರಾಜ್ಯ ಹಾಗೂ ವಿದೇಶಿಗರಿಗೆ ಇಲ್ಲಿ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಇಲ್ಲಿಗೆ ಬರುವ ಸ್ಥಳೀಯ ಗ್ರಾಹಕರು ಅನ್ಯಭಾಷಿಗರೊಂದಿಗೆ ಏನು ಮಾತಾಡಬೇಕು, ಏನನ್ನು ಕೇಳಿ ಪಡೆದುಕೊಳ್ಳಬೇಕು ಎಂಬ ಗೊಂದಲಕ್ಕೆ ಒಳಗಾಗುತ್ತಾರೆ.
ಜೊತೆಗೆ ತಮಗಿಷ್ಟವಾದ ತಿಂಡಿ ತಿನಿಸುಗಳನ್ನು ತೆಗೆದುಕೊಳ್ಳಲು ಇಂತಹ ಅಂಗಡಿ ಮುಂಗಟ್ಟುಗಳಲ್ಲಿ ಗ್ರಾಹಕರು ಪರಕೀಯರಂತೆ ಹರಸಾಹಸ ಪಡುವಂತಾಗಿದೆ. ಹೊರ ರಾಜ್ಯ ಹಾಗೂ ವಿದೇಶಿಗರು ಸಕ್ರಿಯವಾಗಿ ಕೆಲಸ ಮಾಡುತ್ತಾರೆ ಎಂದು ಅವರನ್ನು ಕೆಲಸಕ್ಕೆ ನೇಮಿಸಿಕೊಂಡಿರಬಹುದು. ಆದರೆ ಅವರಿಗೆ ಭಾಷಾ ಜ್ಞಾನದ ಕೊರತೆಯಿಂದ ಗ್ರಾಹಕರಿಗೆ ತೊಡಕುಂಟಾಗುತ್ತದೆ. ಹಾಗಾಗಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡಿಗರಿಗೂ ಹೆಚ್ಚು ಅವಕಾಶ ಕೊಡಬೇಕಿದೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…
ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ…
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…