Andolana originals

ಓದುಗರ ಪತ್ರ: ಪ್ರೀ ಪೇಯ್ಡ್ ಆಟೋ ಚಾಲಕರಿಂದಲೂ ಹೆಚ್ಚು ಹಣ ವಸೂಲಿ

ಮೈಸೂರಿನ ರೈಲು ನಿಲ್ದಾಣದಲ್ಲಿ ಸೇವೆ ನೀಡುವ ಆಟೋ ಚಾಲಕರು ಪ್ರಯಾಣಿಕರಿಂದ ರಾತ್ರಿ ೧೦ ಗಂಟೆಯ ನಂತರ ಕನಿಷ್ಠ ಪ್ರಯಾಣದರವನ್ನು ೨೫೦-೩೦೦ ರೂ. ಪಡೆಯುತ್ತಿದ್ದಾರೆ ಹಾಗೂ ದೂರವಿದ್ದಲ್ಲಿ ೫೦೦-೬೦೦ ರೂ.ವರೆಗೂ ಸುಲಿಗೆ ಮಾಡುತ್ತಿದ್ದಾರೆ. ಪ್ರಿ ಪೇಯ್ಡ್‌ಆಟೋ ಚಾಲಕರು ಪ್ರಯಾಣಿ ಕರನ್ನು ಆಟೋದಲ್ಲಿ ಹತ್ತಿಸಿಕೊಂಡು ನಿಗದಿತ ಸ್ಥಳಕ್ಕೆ ತಲುಪಿದ ಮೇಲೆ ಚೀಟಿಯಲ್ಲಿರುವ ಹಣಕ್ಕಿಂತ ೩೦ ರಿಂದ ೫೦ ರೂ. ಹೆಚ್ಚು ಹಣಕ್ಕಾಗಿ ಪೀಡಿಸುವುದು ಸರಿಯಲ್ಲ. ಮತ್ತೊಂದು ಕಡೆ ಓಲಾ, ಊಬರ್ ಮೊದಲಾದ ಆಪ್ ಆಧಾರಿತ ಆಟೋ ಚಾಲಕರು ರಾತ್ರಿ ೯ ಗಂಟೆಯ ನಂತರ ಎಷ್ಟೇ ಸಲ ಬುಕಿಂಗ್ ಮಾಡಿದರೂ ರೈಲು ನಿಲ್ದಾಣದತ್ತ ಮುಖ ಮಾಡದಿರುವುದರಿಂದ ರಾತ್ರಿ ವೇಳೆ ರೈಲಿನಲ್ಲಿ ಆಗಮಿಸುವ ಪ್ರಯಾಣಿಕರು ತಮ್ಮ ಮನೆಯನ್ನು ತಲುಪಲು ಪರದಾಡುವಂತಾಗಿದೆ.

ಪೊಲೀಸರು ಹಾಗೂ ರೈಲ್ವೆ ಇಲಾಖೆಯವರು ರೈಲು ನಿಲ್ದಾಣದ ಬಳಿ ಪ್ರಯಾಣಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಆಟೋ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜನರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ಆರ್. ಯಶಸ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago