ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ ಗೌರವ ಸಾಧಕರಿಗೆ ಮತ್ತಷ್ಟು ಹುರುಪು ತುಂಬುತ್ತದೆ ಎಂದರೆ ತಪ್ಪಾಗಲಾರದು. ೨೦೨೪ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ. ಇತ್ತೀಚೆಗೆ ಪ್ರಶಸ್ತಿಗಳನ್ನು ಪಡೆಯುವುದೇ ಒಂದು ದೊಡ್ಡ ಲಾಬಿ ಆಗಿಹೋಗಿದೆ. ಪ್ರಶಸ್ತಿಗೆ ಅರ್ಹರಲ್ಲದವರೂ ರಾಜಕೀಯ ಪ್ರಭಾವ ಬಳಸಿ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಬಾರಿ ಸಾಧಕರನ್ನು ಆಯ್ಕೆ ಮಾಡುವಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ಅರ್ಹರನ್ನು ಗುರುತಿಸಿ ಪ್ರಶಸ್ತಿ ನೀಡಲಿ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ