ಓದುಗರ ಪತ್ರ
ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ ಕೆರೆ ವಿಭಜನೆಯಾಗಿದ್ದು, ಎರಡೂ ಬದಿಗಳಲ್ಲಿರುವ ಕೆರೆಯ ಗಡಿಯನ್ನು ಗುರುತಿಸಿ, ಕಬ್ಬಿಣದ ಬೇಲಿಯನ್ನು ಹಾಕಲಾಗಿತ್ತು. ಕೇರ್ಗಳ್ಳಿ ಪಂಚಾಯಿತಿಯಿಂದ ಪ್ರತಿದಿನವೂ ತ್ಯಾಜ್ಯವನ್ನು ತೆರವುಗೊಳಿಸಲಾಗುತ್ತಿದೆ.
ಚಾಮುಂಡೇಶ್ವರಿ ವಿದ್ಯುತ್ ನಿಗಮದಿಂದ ಭೂಗತ ಕೇಬಲ್ ಅಳವಡಿಕೆಯ ಸಮಯದಲ್ಲಿ ಬೇಲಿಯನ್ನು ತುಂಡರಿಸಿರುವ ಪರಿಣಾಮ ಕೆರೆಯ ಅಂಗಳವನ್ನು ಪ್ರವೇಶಿಸುವುದು ಸುಲಭವಾಗಿ, ತ್ಯಾಜ್ಯವನ್ನು ಸುರಿಯುತ್ತಿದ್ದಾರೆ. ಸಂಬಂಧಪಟ್ಟವರು ಕೂಡಲೇ ಈ ಮೊದಲಿನಂತೆ ಕೆರೆಗೆ ಕಬ್ಬಿಣದ ಬೇಲಿಯನ್ನು ನಿರ್ಮಿಸಿ ಕೆರೆಗೆ ತ್ಯಾಜ್ಯವನ್ನು ಸುರಿಯುವುದನ್ನು ತಡೆಗಟ್ಟಬೇಕು ಹಾಗೂ ಕೆರೆಗೆ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
-ವೈ.ಕಾಶಿ, ಕನಕದಾಸನಗರ, ಮೈಸೂರು
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…