ಓದುಗರ ಪತ್ರ
ಇಂದಿನ ತಂತ್ರಜ್ಞಾನ ಯುಗದಲ್ಲಿ ಬ್ಯಾಂಕಿಂಗ್, ವ್ಯಾಪಾರ, ಶಿಕ್ಷಣ ಎಲ್ಲವೂ ಡಿಜಿಟಲ್ ಆಗುತ್ತಿವೆ. ಈ ಅಭಿವೃದ್ಧಿಯ ಜತೆಗೆ ‘ ಸೋಶಿಯಲ್ ಎಂಜಿನಿಯರಿಂಗ್’ ಎಂಬ ಹೊಸ ರೀತಿಯ ಆನ್ಲೆ ನ್ ಮೋಸಗಳು ಅಪಾಯಕಾರಿಯಾಗಿ ಬೆಳೆಯುತ್ತಿವೆ. ಜನರ ವಿಶ್ವಾಸ, ಭಾವನೆ ಮತ್ತು ಅಗತ್ಯತೆಗಳನ್ನು ಬಂಡವಾಳ ಮಾಡಿಕೊಂಡು ಬ್ಯಾಂಕ್ ಸಿಬ್ಬಂದಿ ಅಥವಾ ಸರ್ಕಾರಿ ನೌಕರರಂತೆ ನಟಿಸಿ ಹಣ ಹಾಗೂ ವೈಯಕ್ತಿಕ ಮಾಹಿತಿಯನ್ನು ಕಸಿದುಕೊಳ್ಳುತ್ತಿದ್ದಾರೆ.
ಇದು ಕೇವಲ ತಾಂತ್ರಿಕ ಸಮಸ್ಯೆಯಲ್ಲ. ಮಾನವ ಮನಸ್ಸಿನ ಭದ್ರತೆಯ ಪರೀಕ್ಷೆ. ಶಿಕ್ಷಣ ಪಡೆದವರೂ ಈ ಬಲೆಗೆ ಬೀಳುತ್ತಿರುವುದು ಆತಂಕಕಾರಿ. ಹೀಗಾಗಿ ತಾಂತ್ರಿಕ ಭದ್ರತೆಯಷ್ಟೇ ಅಲ್ಲ, ಜಾಗೃತಿಯೇ ನಿಜವಾದ ರಕ್ಷಣೆಯಾಗಿದೆ. ಸರ್ಕಾರವು ಶಾಲೆ-ಕಾಲೇಜುಗಳಲ್ಲಿ ‘ಡಿಜಿಟಲ್ ಸುರಕ್ಷತೆ’ ಕುರಿತ ಪಾಠವನ್ನು ಅಳವಡಿಸಬೇಕು, ಸೈಬರ್ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಬೇಕು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು. ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಹೊಸ ಮೋಸದ ವಿಧಾನಗಳ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಬೇಕು. ಜೊತೆಗೆ ಜನರಿಗೆ ನಕಲಿ ಕರೆಗಳು, ಇ -ಮೇಲ್‌ಗಳು ಮತ್ತು ಸಂದೇಶಗಳನ್ನು ಗುರುತಿಸುವ ತರಬೇತಿಯನ್ನು ನೀಡುವ ಕಾರ್ಯಕ್ರಮಗಳನ್ನು ಕೂಡ ಪ್ರಾರಂಭಿಸಬೇಕು.
-ಡಾ. ಎಚ್. ಕೆ.ವಿಜಯಕುಮಾರ್, ಬೆಂಗಳೂರು
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…