Andolana originals

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ ಜಲ ಮೂಲವಾಗಿದೆ. ಲಕ್ಷ್ಮಣತೀರ್ಥ ನದಿಯ ನೀರನ್ನು ಕೃಷಿ,ಕುಡಿಯುವ ನೀರು ಮತ್ತು ದೈನಂದಿನ ಬಳಕೆಗಾಗಿ ಜನರು ಅವಲಂಬಿಸಿದ್ದಾರೆ. ಆದರೆ ೮-೯ ವರ್ಷಗಳಿಂದ ನಗರದ ಕೆಲವು ಭಾಗಗಳಲ್ಲಿ ಪ್ಲಾಸ್ಟಿಕ್ ಕಸ ಮತ್ತು ಮಲಿನ ನೀರನ್ನು ನದಿಗೆ ಬಿಡುತ್ತಿರುವುದರಿಂದ ನದಿಯ ನೀರು ಕಲುಷಿತವಾಗಿದೆ. ಇದರಿಂದ ಕುಡಿಯುವ ನೀರಿನ ಗುಣಮಟ್ಟ ಹಾಳಾಗುತ್ತಿದೆ; ಜನರ ಆರೋಗ್ಯಕ್ಕೂ ಹಾನಿ ಉಂಟಾಗುತ್ತದೆ.ಈ ಪರಿಸ್ಥಿತಿ ಮುಂದುವರಿದರೆ ಭವಿಷ್ಯದಲ್ಲಿ ಹುಣಸೂರು ಭಾಗದಲ್ಲಿ ನೀರಿನ ದೊಡ್ಡ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ನದಿಯ ಸ್ವಚ್ಛತೆ ಕಾಪಾಡಬೇಕು. ನದಿಗೆ ಕಸ ಮತ್ತು ಮಲಿನ ನೀರು ಬಿಡುವುದನ್ನು ತಡೆಯಬೇಕು. ನದಿಗೆ ಕಸವನ್ನು ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ನಿಯಮ ಉಲ್ಲಂಸುವವರಿಗೆ ದಂಡವನ್ನೂ ವಿಧಿಸಬೇಕು. ನದಿಯನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

– ಎಂ.ಅರ್ಪಿತ, ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

9 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

9 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

15 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

15 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

15 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

16 hours ago